ಅಮೃತಸರ: ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಕಳ್ಳ ಸಾಗಾಣೆ ಮಾಡುತ್ತಿದ್ದ ಜಮ್ಮು ಕಾಶ್ಮೀರ ಮೂಲದ ಟ್ರಕ್ವೊಂದನ್ನು ಅಮೃತಸರದಲ್ಲಿ ವಶಕ್ಕೆ ಪಡೆಯಲಾಗಿದೆ. ಕ್ಷಿಪ್ರ ಕಾರ್ಯಾಚರಣೆಯನ್ನು ನಡೆಸುವ ಮೂಲಕ ಜಮ್ಮ ಕಾಶ್ಮೀರ ಪೊಲೀಸರು ಈ ಸಾಧನೆಯನ್ನು ಮಾಡಿದ್ದಾರೆ. ಅವರ ಕಾರ್ಯದಿಂದಾಗಿ ಉಗ್ರರ ದುಷ್ಕೃತ್ಯ ಎಸಗುವ ಯೋಜನೆ ಬುಡಮೇಲಾಗಿದೆ.
ಟ್ರಕ್ ಶ್ರೀನಗರಕ್ಕೆ ತೆರಳುತ್ತಿದ್ದ ವೇಳೆ ಪಂಜಾಬ್-ಜಮ್ಮು ಗಡಿಯಲ್ಲಿನ ಕಥುವಾ ಮತ್ತು ಲಖಾನ್ಪುರ ನಡುವೆ ಪೊಲೀಸರು ನಿಲ್ಲಿಸಿದರು. ದಿನಸಿ ಸಾಮಗ್ರಿಗಳ ನಡುವೆ ಶಸ್ತ್ರಾಸ್ತ್ರಗಳನ್ನು ಬಚ್ಚಿಡಲಾಗಿತ್ತು ಎಂದು ಹೇಳಲಾಗಿದೆ.
ಅಮೃಸರದಿಂದ ಈ ಟ್ರಕ್ ಕಣಿವೆಗೆ ಶಸ್ತ್ರಾಸ್ತ್ರಗಳನ್ನು ತುಂಬಿಸಿಕೊಂಡು ಹೋಗುತ್ತಿತ್ತು ಎನ್ನಲಾಗಿದೆ. ಆದರೆ ಕಾರ್ಯಪವೃತ್ತರಾಗಿದ್ದ ಜಮ್ಮ ಕಾಶ್ಮೀರ ಪೊಲೀಸರು ಲಖನಪುರ ನಗರದಲ್ಲಿ ಇದನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಟ್ರಕ್ ಒಳಗಿನಿಂದ ಆರು ಎಕೆ-47 ರೈಫಲ್ಗಳನ್ನು ಮತ್ತು ನಾಲ್ಕೂವರೆ ಲಕ್ಷ ರೂಪಾಯಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಮೂರು ಮಂದಿ ಉಗ್ರರನ್ನು ಬಂಧಿಸಲಾಗಿದೆ.
ಪೊಲೀಸರು ಪ್ರಕರಣದ ತನಿಖೆಯನ್ನು ಆರಂಭಿಸಿದ್ದು, ಈ ಟ್ರಕ್ ಯಾರಿಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡುತ್ತಿತ್ತು ಎಂಬುದು ಇನ್ನು ಪತ್ತೆಯಾಗಬೇಕಿದೆ. ಶಸ್ತ್ರಾಸ್ತ್ರ ಕಳ್ಳಸಾಗಾಣೆಯನ್ನು ಎರಡನೇ ಬಾರಿಗೆ ಜಮ್ಮು ಕಾಶ್ಮೀರ ಪೊಲೀಸರು ವಿಫಲಗೊಳಿಸುತ್ತಿದ್ದಾರೆ. ಇತ್ತೀಚಿಗೆ ಕೂಡ ಕಾಶ್ಮೀರ ಕಣಿವೆಯತ್ತ ಸಾಗುತ್ತಿದ್ದ ಶಸ್ತ್ರಾಸ್ತ್ರ ತುಂಬಿದ ಟ್ರಕ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
370ನೇ ವಿಧಿಯನ್ನು ರದ್ದುಪಡಿಸಿದ ಬಳಿಕ ಪ್ರತ್ಯೇಕತಾವಾದಿಗಳು ಮತ್ತು ಉಗ್ರರು ಕಣಿವೆಯಲ್ಲಿ ದೊಡ್ಡ ಮಟ್ಟದ ಹಿಂಸಾಚಾರವನ್ನು ನಡೆಸಲು ಹವಣಿಸುತ್ತಿದ್ದಾರೆ. ಆದರೆ ಭದ್ರತಾ ಪಡೆಗಳು, ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು ಇದುವರೆಗೆ ಯಾವುದೇ ದುಷ್ಕೃತ್ಯಕ್ಕೂ ಎಡೆಮಾಡಿಕೊಟ್ಟಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.