ಬಾರಬಂಕಿ: ಮತ್ತೊಮ್ಮೆ ಜಗತ್ತಿನ ಮುಂದೆ ಉತ್ತರಪ್ರದೇಶದ ಪಾಪಿಗಳ ಕರಾಳ ಮುಖ ಅನಾವರಣಗೊಂಡಿದೆ. ಪತಿಯ ಬಿಡುಗಡೆಗೆ ಲಂಚ ಕೊಡಲಿಲ್ಲ ಎಂಬ ಕಾರಣಕ್ಕೆ ಮಹಿಳೆಯೊಬ್ಬಳನ್ನು ಪೊಲೀಸರು ಪೊಲೀಸ್ ಸ್ಟೇಶನ್ ಒಳಗಡೆಯೇ ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಅತ್ಯಂತ ಘೋರ ಘಟನೆ ನಡೆದಿದೆ.
40 ವರ್ಷದ ಮಹಿಳೆಯನ್ನು ಪತ್ರಕರ್ತನೊಬ್ಬನ ತಾಯಿ ಎನ್ನಲಾಗಿದ್ದು, ಸುಟ್ಟ ಗಾಯಗಳೊಂದಿಗೆ ಸೋಮವಾರ ಬೆಳಿಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ರಾತ್ರಿ ಆಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಳಾಗಿದ್ದಾಳೆ.
ಕಸ್ಟಡಿಯಲ್ಲಿದ್ದ ಗಂಡನನ್ನು ಬಿಡಿಸುವ ಸಲುವಾಗಿ ಆಕೆ ಪೊಲೀಸ್ ಸ್ಟೇಶನ್ನಿಗೆ ಬಂದಿದ್ದಳು ಆದರೆ ಲಂಚ ಕೊಡಲು ಆಕೆ ಒಪ್ಪದಿದ್ದ ಕಾರಣ ಪೊಲೀಸರು ಆಕೆಗೆ ಬೆಂಕಿ ಹಚ್ಚಿದ್ದಾರೆ ಎಂದು ಹೇಳಲಾಗಿದೆ.
ಕಾತಿ ಪೊಲೀಸ್ ಸ್ಟೇಶನ್ನಿನಲ್ಲಿ ಈ ಘಟನೆ ನಡೆದಿದೆ. ಇಬ್ಬರು ಅಧಿಕಾರಿಗಳನ್ನು ಈ ಸಂಬಂಧ ಅಮಾನತುಗೊಳಿಸಲಾಗಿದೆ. ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಘಟನೆಯ ಬಗ್ಗೆ ತನಿಖೆಗೆ ಆಗ್ರಹಿಸಿದ್ದಾರೆ.
ಪೊಲೀಸರೇ ಈ ರೀತಿ ಅಮಾನುಷವಾಗಿ ವರ್ತಿಸಿರುವುದು ಸಾರ್ವಜನಿಕರಲ್ಲಿ ಅಸುರಕ್ಷಿತ ಭಾವನೆಯನ್ನು ಉಂಟು ಮಾಡಿದೆ. ಉತ್ತರ ಪ್ರದೇಶದಲ್ಲಿ ಕಾನೂನು ವ್ಯವಸ್ಥೆ ಯಾವ ಸ್ಥಿತಿಯಲ್ಲಿ ಹದಗೆಟ್ಟಿದೆ ಎಂಬುದಕ್ಕೆ ಇದೊಂದು ಪ್ರತ್ಯಕ್ಷ ಸಾಕ್ಷಿ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.