ನವದೆಹಲಿ: ಯಾವುದೇ ಸನ್ನಿವೇಶವನ್ನು ಎದುರಿಸಲು ಭಾರತೀಯ ಸೇನೆ ಸಿದ್ಧವಿದೆ, ಭಾರತ ಸರ್ಕಾರವು ಪಾಕಿಸ್ಥಾನ ಆಕ್ರಮಿತ ಕಾಶ್ಮೀರದ ಬಗ್ಗೆ ಶೀಘ್ರದಲ್ಲೇ ನಿರ್ಧಾರವನ್ನು ತೆಗೆದುಕೊಳ್ಳಬೇಕು ಎಂದು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಹೇಳಿದ್ದಾರೆ. ಅವರ ಹೇಳಿಕೆಯು ಸೇನೆ ಸರ್ಕಾರದ ಆದೇಶಕ್ಕೆ ಕಾದು ಕುಳಿತಿದೆ ಎಂಬ ದಿಟ್ಟ ಸಂದೇಶವನ್ನು ಪಾಕಿಸ್ಥಾನಕ್ಕೆ ರವಾನೆ ಮಾಡಿದೆ.
“ಇಂತಹ ವಿಷಯಗಳ ಬಗ್ಗೆ ಸರ್ಕಾರವು ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ. ಸಂಸ್ಥೆಗಳು ಸರ್ಕಾರ ನೀಡಿದ ಆದೇಶದ ಅನ್ವಯ ಕಾರ್ಯನಿರ್ವಹಣೆ ಮಾಡುತ್ತವೆ. ಸೇನೆ ಸದಾ ಸಿದ್ಧವಾಗಿಯೇ ಇರುತ್ತದೆ” ಎಂದು ರಾವತ್ ಹೇಳಿದ್ದಾರೆ.
ಜಮ್ಮು ಕಾಶ್ಮೀರದ ಬಗ್ಗೆ ಮಾತನಾಡಿದ ಅವರು, ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಈ ಪ್ರದೇಶದ ಜನರು ಸೇನೆಗೆ ಸಹಕಾರವನ್ನು ನೀಡಬೇಕು. ಹಲವು ವರ್ಷಗಳಿಂದ ಕಾಶ್ಮೀರದ ಜನರು ಭಯೋತ್ಪಾದನೆಯ ನೋವನ್ನು ಅನುಭವಿಸುತ್ತಿದ್ದಾರೆ, ಈಗ ಅವರು ಶಾಂತಿಯನ್ನು ಸೃಷ್ಟಿಸಲು ಮತ್ತು ಅಭಿವೃದ್ಧಿಯನ್ನು ಮಾಡಲು ಸರ್ಕಾರಕ್ಕೊಂದು ಅವಕಾಶವನ್ನು ನೀಡಬೇಕು ಎಂದಿದ್ದಾರೆ.
ಮಂಗಳವಾರ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು, ಕೇಂದ್ರ ಸರ್ಕಾರ ಪಾಕಿಸ್ಥಾನ ಕಾಶ್ಮೀರ ಆಕ್ರಮಿತ ಪಾಕಿಸ್ಥಾನದ ಭಾಗಗಳನ್ನು ವಶಪಡಿಸಿಕೊಳ್ಳುವ ನಿಟ್ಟಿನಲ್ಲಿ ಚಿಂತನೆ ಆರಂಭಿಸಿದೆ ಎಂದಿದ್ದರು. ಇದೀಗ ಸೇನಾ ಮುಖ್ಯಸ್ಥರೂ ಅದೇ ನಿಟ್ಟಿನಲ್ಲಿನ ಹೇಳಿಕೆಯನ್ನು ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.