ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ಅಕ್ಟೋಬರ್ 3 ಮತ್ತು 4ರಂದು ಸೇನಾ ನೇಮಕಾತಿ ಕಾರ್ಯಕ್ರಮ ನಡೆಸುವುದಾಗಿ ಲೆಫ್ಟಿನೆಂಟ್ ಜನರಲ್ ಕೆಜೆಎಸ್ ದಿಲ್ಲಾನ್ ಹೇಳಿದ್ದಾರೆ.
“ಕಾಶ್ಮೀರದ ಜನತೆಗೆ ರಾಜ್ಯಪಾಲರು ಹಲವಾರು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ ಮತ್ತು 3 ಸಾವಿರಕ್ಕೂ ಹೆಚ್ಚು ಖಾಲಿ ಹುದ್ದೆಗಳಿಗೆ ಸೇನಾ ನೇಮಕಾತಿ ಕಾರ್ಯಕ್ರಮವನ್ನು ಆರಂಭಿಸಿದ್ದಾರೆ. ಮೊದಲ ನೇಮಕಾತಿ ಕಾರ್ಯಕ್ರಮವು ಅಕ್ಟೋಬರ್ 3 ಮತ್ತು 4 ರಂದು ಜರುಗಲಿದೆ. ಅದಕ್ಕೂ ಹದಿನೈದು ದಿನಗಳ ಮುನ್ನ ಯುವಕರು ನೇಮಕಗೊಳ್ಳಲು ಸಹಾಯವಾಗಲಿ ಎಂಬ ಕಾರಣಕ್ಕೆ ತರಬೇತಿಗಳನ್ನು ನೀಡಲಾಗುತ್ತಿದೆ. ಇನ್ನಷ್ಟು ಹುದ್ದೆಗಳಿಗೆ ನೇಮಕಾತಿಗಳನ್ನು ನಾವು ನಡೆಸಲಿದ್ದೇವೆ ಈ ಬಗ್ಗೆ ಕೆಲ ಸಮಯದ ನಂತರ ಘೋಷಣೆ ಮಾಡುತ್ತೇವೆ” ಎಂದಿದ್ದಾರೆ.
ಅಲ್ಲದೇ ಜಮ್ಮು ಕಾಶ್ಮೀರದ ಮಕ್ಕಳನ್ನು ಪ್ರವಾಸಕ್ಕಾಗಿ ದೆಹಲಿ, ಅಜ್ಮೀರ್ ಷರೀಫ್ ಮತ್ತು ಜೈಪುರಗಳಿಗೆ ಕರೆದುಕೊಂಡು ಹೋಗಲಾಗುತ್ತಿದೆ. ಅಭಿವೃದ್ಧಿ ಮತ್ತು ತಂತ್ರಜ್ಞಾನಗಳಿಗೆ ಅವರನ್ನು ತೆರೆದುಕೊಳ್ಳುವಂತೆ ಮಾಡುವುದು ಈ ಪ್ರವಾಸದ ಉದ್ದೇಶವಾಗಿದೆ ಎಂದಿದ್ದಾರೆ.
ಜಮ್ಮು ಕಾಶ್ಮೀರದ ಮಕ್ಕಳನ್ನು ಅಭಿವೃದ್ಧಿ ಮತ್ತು ತಂತ್ರಜ್ಞಾನಕ್ಕೆ ತೆರೆದುಕೊಳ್ಳುವ ನಮ್ಮ ಪ್ರಯತ್ನದ ಭಾಗವಾಗಿ ಅವರನ್ನು ದೆಹಲಿ ಮುಂತಾದ ಪ್ರದೇಶಗಳಿಗೆ ಕರೆದುಕೊಂಡು ಹೋಗುತ್ತಿದ್ದೇವೆ, ಇದು ಅವರ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುತ್ತದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.