ಇಸ್ಲಾಮಾಬಾದ್: ಪಾಕಿಸ್ಥಾನದ ಸಿಂಧ್ ಪ್ರಾಂತ್ಯದ ಘೋಟ್ಕಿ ನಗರದಲ್ಲಿ ಹಿಂದೂ ಧರ್ಮಿಯರಿಗೆ ಸೇರಿದ ಹಲವಾರು ಮನೆ ಮತ್ತು ದೇಗುಲಗಳನ್ನು ನಾಶಪಡಿಸಲಾಗಿದೆ. ಹಿಂದೂ ಆಗಿರುವ ಶಾಲಾ ಪ್ರಾಂಶುಪಾಲರೊಬ್ಬರು ಧರ್ಮ ನಿಂದನೆ ಮಾಡಿದರು ಎಂಬ ಕಾರಣಕ್ಕೆ ಮುಸ್ಲಿಂ ಮೂಲಭೂತವಾದಿಗಳು ಈ ಕೃತ್ಯ ಎಸಗಿದ್ದಾರೆ.
ಪಾಕಿಸ್ಥಾನದ ಮಾನವ ಹಕ್ಕುಗಳ ಆಯೋಗ ಈ ವಿಷಯದ ಬಗ್ಗೆ ವಿಚಾರಣೆ ನಡೆಸುತ್ತಿದೆ, ಈ ಘಟನೆಯಿಂದಾಗಿ ಹಿಂದೂ ಮತ್ತು ಮುಸ್ಲಿಮರ ನಡುವೆ ದೊಡ್ಡ ಮಟ್ಟದ ಹಿಂಸಾಚಾರ ಉಲ್ಬಣಗೊಳ್ಳುವ ಆತಂಕ ಸೃಷ್ಟಿಯಾಗಿದೆ.
ಮಾನವ ಹಕ್ಕುಗಳ ಆಯೋಗವು, ಧರ್ಮನಿಂದನೆಯ ವಿಷಯದಲ್ಲಿ ಹಿಂದೂ ಸಮುದಾಯದ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ಟ್ವಿಟ್ ಮೂಲಕ ಹೇಳಿದೆ.
ವರ್ಲ್ಡ್ ಸಿಂಧಿ ಕಾಂಗ್ರೆಸ್ ಹಿಂಸಾಚಾರದ ವರದಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಇತರ ದೇಶಗಳಿಗೆ ಆ ದೇಶದ ಮೇಲೆ ಒತ್ತಡ ಹೇರುವಂತೆ ಮನವಿ ಮಾಡಿಕೊಂಡಿದೆ. “ಧಾರ್ಮಿಕ ಅಲ್ಪಸಂಖ್ಯಾತರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಪಾಕಿಸ್ಥಾನದ ಮೇಲೆ ಒತ್ತಡ ತರಬೇಕು. ಹಿಂದೂ ಸಮುದಾಯಕ್ಕೆ ಸೇರಿದ ದೇವಾಲಯಗಳು, ಅಂಗಡಿಗಳು ಮತ್ತು ಮನೆಗಳನ್ನು ದರೋಡೆ ಮಾಡಲಾಗಿದೆ ಎಂದು ಮಾನವ ಹಕ್ಕುಗಳ ಸಂಸ್ಥೆಯ ಟ್ವೀಟ್ನಲ್ಲಿ ಹೇಳಿದೆ” ಎಂದಿದೆ.
ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ಪಾಕಿಸ್ಥಾನದ ಮಾಧ್ಯಮಗಳು ವರದಿ ಬಿತ್ತರಿಸಿವೆ. ಹಿಂಸಾಚಾರಕ್ಕೆ ಸಂಬಂಧಿಸಿದಂತೆ 50 ಮಂದಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.
ಇಸ್ಲಾಂ ಮೂಲಭೂತವಾದಿ ದೇಶವಾದ ಪಾಕಿಸ್ಥಾನವು ಅಲ್ಲಿ ಅಲ್ಪಸಂಖ್ಯಾತರಿಗೆ ಕಿಂಚಿತ್ತೂ ಗೌರವವನ್ನು ನೀಡುತ್ತಿಲ್ಲ. ಅವರ ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.