ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ದಿಗೆ ಸಿಎಂ ಬಿಎಸ್ ಯಡಿಯೂರಪ್ಪನವರು ಬದ್ಧತೆಯನ್ನು ಪ್ರದರ್ಶಸಿದ್ದಾರೆ. ಕರ್ನಾಟಕ ಅನುಸೂಚಿತ ಜಾತಿಗಳ ಉಪಹಂಚಿಕೆ ಮತ್ತು ಬುಡಕಟ್ಟು ಉಪಹಂಚಿಕೆ ಅಧಿನಿಯಮ-2013 ಅನ್ನು ಅನುಷ್ಠಾನಗೊಳಿಸುವುದು ಸೇರಿದಂತೆ ಸಾಕಷ್ಟು ಕ್ರಮಗಳನ್ನು ಪ್ರಕಟಿಸಿದ್ದಾರೆ.
ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸರ್ವೋತೋಮುಖ ಅಭಿವೃದ್ಧಿಗಾಗಿ ವಿವಿಧ ಅಭಿವೃದ್ಧಿ ಇಲಾಖೆಗಳ ಮೂಲಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಕರ್ನಾಟಕ ಅನುಸೂಚಿತ ಜಾತಿಗಳ ಉಪಹಂಚಿಕೆ ಮತ್ತು ಬುಡಕಟ್ಟು ಉಪಹಂಚಿಕೆ ಅಧಿನಿಯಮ-2013ರಡಿ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಜನಸಂಖ್ಯೆಯ ಪ್ರಮಾಣಕ್ಕೆ ಅನುಗುಣವಾಗಿ ರಾಜ್ಯ ಆಯವ್ಯಯದಲ್ಲಿ ಅನುದಾನವನ್ನು ಮೀಸಲಿಡಲು ನಿರ್ಧರಿಸಲಾಗಿದೆ.
ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿ ಪರಿಷತ್ ರಚನೆಯಾಗಿದ್ದು, ಕ್ರಿಯಾಯೋಜನೆ ಅನುಮೋದನೆ ಹಾಗೂ ಕಾರ್ಯಕ್ರಮದ ಸಮರ್ಪಕ ಅನುಷ್ಠಾನದ ಮೇಲ್ವಿಚಾರಣೆಯನ್ನು ಈ ಪರಿಷತ್ ನಿರ್ವಹಿಸಲಿದೆ. ಈ ಬಗ್ಗೆ ಎಲ್ಲಾ ಇಲಾಖೆಗಳಿಗೆ ಮಾರ್ಗದರ್ಶನ ನೀಡಲಾಗಿದೆ.
ಪರಿಶಿಷ್ಟ ಜಾತಿ/ಪಂಗಡ ಮತ್ತು ಸಾಮಾನ್ಯ ಜನರ ನಡುವೆ ಇರುವ ಅಭಿವೃದ್ಧಿ ಅಂತರವನ್ನು ಕಡಿಮೆಗೊಳಿಸಲು ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದು ಆರೋಗ್ಯ, ಶಿಕ್ಷಣ, ವಸತಿ, ನೈರ್ಮಲ್ಯ ಮುಂತಾದ ವೈಯಕ್ತಿಕ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ.
ಸಭೆಯಲ್ಲಿ ಎಲ್ಲಾ ಇಲಾಖೆಗಳ ಪ್ರಗತಿ ಪರಿಶೀಲನೆ ಮಾಡಲಾಗಿದ್ದು, ಎಲ್ಲ ಅಧಿಕಾರಿಗಳಿಗೆ ಅನುದಾನವನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿ, ತ್ವರಿತವಾಗಿ ಅನುಷ್ಠಾನ ಮಾಡುವಂತೆ ಸೂಚನೆ ನೀಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.