ಬೆಂಗಳೂರು: ಕರ್ನಾಟಕ ಸರ್ಕಾರವು ಜಮ್ಮು ಕಾಶ್ಮೀರ ಮತ್ತು ಲಡಾಖ್ ಪ್ರದೇಶದಲ್ಲಿ ಪ್ರವಾಸೋದ್ಯಮ ಮತ್ತು ಆತಿಥ್ಯ ವಲಯದಲ್ಲಿ ಹೂಡಿಕೆಯನ್ನು ಮಾಡಲು ಆಸಕ್ತಿಯನ್ನು ತೋರಿಸಿದೆ. 370ನೇ ವಿಧಿಯನ್ನು ರದ್ದುಗೊಳಿಸಿದ ಬಳಿಕ ಇಲ್ಲಿ ಭಾರತದ ಇತರ ರಾಜ್ಯಗಳು ಭೂಮಿ ಖರೀದಿಗೆ ಹೆಚ್ಚಿನ ಆಸಕ್ತಿಯನ್ನು ತೋರಿಸುತ್ತಿವೆ.
ಜಮ್ಮು ಕಾಶ್ಮೀರದ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರಿಗೆ ಈ ಬಗ್ಗೆ ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಪತ್ರವನ್ನು ಬರೆದಿದ್ದಾರೆ. ಮಹಾರಾಷ್ಟ್ರದ ಬಳಿಕ ಕರ್ನಾಟಕವು ಇಂತಹ ಆಫರ್ ನೀಡುತ್ತಿರುವ ಎರಡನೇಯ ರಾಜ್ಯವಾಗಿದೆ. ಮಹಾರಾಷ್ಟ್ರವು ಶ್ರೀನಗರ ಮತ್ತು ಲಡಾಖ್ ಪ್ರದೇಶದಲ್ಲಿ ರೆಸಾರ್ಟ್ ನಿರ್ಮಾಣ ಮಾಡಲು ಅನುಮತಿಯನ್ನು ಕೇಳಿದೆ.
“ನಾವು ಶೀಘ್ರದಲ್ಲೇ ಸಂಪುಟದ ಮುಂದೆ ಪ್ರಸ್ತಾವನೆಯನ್ನು ಇಡುತ್ತೇವೆ ಮತ್ತು ಜಮ್ಮು ಕಾಶ್ಮೀರದಲ್ಲಿ ಹೂಡಿಕೆ ಮಾಡಲು ಅನುಮತಿ ಕೋರಿ ಕೇಂದ್ರ ಮತ್ತು ಜಮ್ಮುಕಾಶ್ಮೀರ ರಾಜ್ಯಪಾಲರಿಗೆ ಪತ್ರ ಬರೆದು ಅದರ ಅನುಮೋದನೆಯನ್ನು ಪಡೆಯುತ್ತೇವೆ” ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಹೇಳಿದ್ದಾರೆ.
ಕಣಿವೆಯಲ್ಲಿ ಬಂಡವಾಳ ಹೂಡಿಕೆ ಮಾಡುವುದು, ಭೂಮಿಯನ್ನು ಖರೀದಿಸುವುದು ಮತ್ತು ಅದನ್ನು ಹೋಟೆಲ್, ರೆಸಾರ್ಟ್ ನಿರ್ಮಾಣಕ್ಕೆ ಸರ್ಕಾರಿ ಸ್ವಾಮ್ಯದ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮಕ್ಕೆ (ಕೆಎಸ್ಟಿಡಿಸಿ) ಹಸ್ತಾಂತರಿಸುವುದು ನಮ್ಮ ಯೋಜನೆಯಾಗಿದೆ.
ರಾಜ್ಯದ ವಿಶೇಷ ಸ್ಥಾನಮಾನ ಹೋದ ನಂತರ ಹೂಡಿಕೆಯನ್ನು ಆಕರ್ಷಿಸಲು ಕೇಂದ್ರ ಸರ್ಕಾರ ಮತ್ತು ಜಮ್ಮು ಕಾಶ್ಮೀರ ಆಡಳಿತವು ಆ ರಾಜ್ಯವನ್ನು ಬ್ರ್ಯಾಂಡಿಂಗ್ ಮಾಡುತ್ತಿದೆ. ಈ ಪ್ರದೇಶದಲ್ಲಿ ಹೂಡಿಕೆ ಮಾಡುವುದರಿಂದ ಸ್ಥಳೀಯ ಯುವಕರಿಗೆ ಉತ್ತಮ ಮೂಲಸೌಕರ್ಯ ಮತ್ತು ಉದ್ಯೋಗಾವಕಾಶಗಳು ದೊರೆಯಲಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.