ನವದೆಹಲಿ: ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಗಳನ್ನು ಶ್ಲಾಘಿಸಿದ್ದು, ಐದು ವರ್ಷಗಳಲ್ಲಿ 50 ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ಮೋದಿ ದೇಶದ ಅದೃಷ್ಟವನ್ನು ಬದಲಾಯಿಸಿದರು ಎಂದಿದ್ದಾರೆ.
ಮಂಗಳವಾರ ಆಲ್ ಇಂಡಿಯಾ ಮ್ಯಾನೇಜ್ಮೆಂಟ್ ಅಸೋಸಿಯೇಶನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಯುಪಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. 2013 ರಲ್ಲಿ ಪ್ರತಿದಿನ ಭ್ರಷ್ಟಾಚಾರದ ಸುದ್ದಿಗಳು ಬರುತ್ತಿದ್ದವು ಮತ್ತು ದೇಶದ ಗಡಿಗಳು ಅಸುರಕ್ಷಿತವಾಗಿದ್ದವು ಮತ್ತು ಭಾರತೀಯ ಸೈನಿಕರನ್ನು ಶಿರಚ್ಛೇಧ ಮಾಡಿ ಅವಮಾನಿಸಲಾಗುತ್ತಿತ್ತು. ಆದರೀಗ ಪರಿಸ್ಥಿತಿ ಬದಲಾಗಿದೆ ಎಂದಿದ್ದಾರೆ.
ಕಾಂಗ್ರೆಸ್ ನೇತೃತ್ವದ ಯುಪಿಎ ಆಡಳಿತದ ಅವಧಿಯಲ್ಲಿ ಪ್ರತಿಯೊಬ್ಬ ಸಚಿವರು ಕೂಡ ತಮ್ಮನ್ನು ತಾವು ಪ್ರಧಾನ ಮಂತ್ರಿ ಎಂದು ಪರಿಗಣಿಸುತ್ತಿದ್ದರು. ಆದರೆ ಪ್ರಧಾನ ಮಂತ್ರಿಯನ್ನು ಪ್ರಧಾನಿ ಎಂದು ಭಾವಿಸುತ್ತಿರಲಿಲ್ಲ ಎಂದಿದ್ದಾರೆ. ಪ್ರಧಾನಿ ಮೋದಿ ಅವರು ಬಿಜೆಪಿಯ ಮತ ಬ್ಯಾಂಕ್ ಅನ್ನು ಗಮನದಲ್ಲಿಟ್ಟುಕೊಂಡು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಆದರೆ ಅವರು ಯಾವಾಗಲೂ ಸಾಮಾನ್ಯ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡಿದ್ದಾರೆ ಎಂದಿದ್ದಾರೆ.
ಮೋದಿಯವರ ಆಡಳಿತದಲ್ಲಿ ಭಾರತೀಯ ಪಡೆಗಳು ನಡೆಸಿದ ಸರ್ಜಿಕಲ್ ಸ್ಟ್ರೈಕ್ ಮತ್ತು ವೈಮಾನಿಕ ದಾಳಿಯ ಬಗ್ಗೆ ಮಾತನಾಡಿದ ಶಾ, ಈ ಘಟನೆಗಳು ಜನರಿಗೆ ಸಂತೋಷ ಮತ್ತು ಹೆಮ್ಮೆಯನ್ನು ನೀಡುತ್ತದೆ, ಆದರೆ ಈ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಕಷ್ಟು ಧೈರ್ಯ ಬೇಕು ಎಂಬ ಅಂಶವನ್ನು ಯಾರೂ ಮರೆಯಬಾರದು. ಕೇಂದ್ರದಲ್ಲಿನ ಮೋದಿ ನೇತೃತ್ವದ ಸರ್ಕಾರವು ಭಾರತದಲ್ಲಿ ಭಯೋತ್ಪಾದನೆಯನ್ನು ಹರಡಲು ಪಾಕಿಸ್ಥಾನಕ್ಕೆ ಅವಕಾಶವನ್ನು ನೀಡುತ್ತಿಲ್ಲ ಎಂದಿದ್ದಾರೆ.
ಪ್ರಧಾನಿ ಮೋದಿ ತೆಗೆದುಕೊಂಡ ಕಠಿಣ ನಿರ್ಧಾರಗಳಿಂದಾಗಿ ಜಾಗತಿಕ ಸಮುದಾಯಗಳು ಈಗ ಭಾರತವನ್ನು ನೋಡುವ ವಿಧಾನವನ್ನು ಬದಲಿಸಿದೆ ಎಂದಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370 ನೇ ವಿಧಿಯನ್ನು ರದ್ದುಗೊಳಿಸುವ ಸರ್ಕಾರದ ನಿರ್ಧಾರದ ಬಗ್ಗೆಯೂ ಮಾತನಾಡಿದ ಶಾ, ಆಗಸ್ಟ್ 5 ರಂದು ಪ್ರಧಾನಿ ಈ ನಿರ್ಧಾರ ತೆಗೆದುಕೊಂಡರು. ಆಗಸ್ಟ್ 5 ರಿಂದ ಸೆಪ್ಟೆಂಬರ್ 17 ರವರೆಗೆ ಕಾಶ್ಮೀರದಲ್ಲಿ ಒಂದೇ ಒಂದು ಗುಂಡು ಕೂಡ ಹಾರಿಲ್ಲ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.