ಮುಂಬಯಿ: ಬ್ಯಾಲೆಟ್ ಪೇಪರ್ಗಳ ಮೂಲಕ ಮತದಾನ ನಡೆಸಲು ಸಾಧ್ಯವಿಲ್ಲ, ಅದು ಈಗ ಇತಿಹಾಸ ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಸುನಿಲ್ ಅರೋರಾ ಬುಧವಾರ ಸ್ಪಷ್ಟದ್ದಾರೆ.
“ಕೆಲವು ರಾಜಕೀಯ ಪಕ್ಷಗಳು ಬ್ಯಾಲೆಟ್ ಪೇಪರ್ ಮೂಲಕ ಮತದಾನ ನಡೆಸುವಂತೆ ಕೇಳಿಕೊಂಡಿದ್ದಾರೆ. ಅದು ಸಾಧ್ಯವಿಲ್ಲ, ಅದೀಗ ಇತಿಹಾಸ ಎಂಬುದನ್ನು ಅವರಿಗೆ ತಿಳಿಸಿದ್ದೇವೆ ”ಎಂದು ಅರೋರಾ ಬುಧವಾರ ಮುಂಬಯಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ವಿವಿಧ ರಾಜಕೀಯ ಪಕ್ಷಗಳು ವ್ಯಕ್ತಪಡಿಸಿದ ಕಳವಳಗಳನ್ನು ನಿವಾರಿಸಲು ಚುನಾವಣಾ ಆಯೋಗವು ಯತ್ನಿಸಿದೆ ಎಂದ ಅವರು, ಎಲೆಕ್ಟ್ರಾನಿಕ್ ಮತ ಯಂತ್ರಗಳನ್ನು ಅಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಮಾಡಬಹುದು, ಆದರೆ ಅವುಗಳನ್ನು ಟ್ಯಾಂಪರ್ ಮಾಡಲು ಯಾರಿಗೂ ಸಾಧ್ಯವಿಲ್ಲ ಎಂದಿದ್ದಾರೆ.
ಚುನಾವಣಾ ಪ್ರಕ್ರಿಯೆಯನ್ನು ಸುಗಮವಾಗಿ ನಡೆಸಲು ಮುಂದಿನ ದಿನಗಳಲ್ಲಿ ಹೆಚ್ಚುವರಿ ಕೇಂದ್ರ ಸಶಸ್ತ್ರ ಪಡೆಗಳನ್ನು ಎಡಪಂಥೀಯ ಉಗ್ರಗಾಮಿತ್ವ ಪೀಡಿತ ಪ್ರದೇಶಗಳಲ್ಲಿ ನಿಯೋಜಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಮತದಾನದ ದಿನಾಂಕಗಳನ್ನು ನಿರ್ಧರಿಸುವ ಸಂದರ್ಭದಲ್ಲಿ ಕೇಂದ್ರ ಪಡೆಗಳನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸಾಗಿಸುವ ಪ್ರಕ್ರಿಯೆಯು ಹೆಚ್ಚು ಪರಿಗಣನೆಗೆ ಬರುತ್ತದೆ ಎಂದು ಅರೋರಾ ಹೇಳಿದ್ದಾರೆ.
ಶೀಘ್ರದಲ್ಲೇ ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳಿಗೆ ಚುನಾವಣೆ ಘೋಷಣೆಯಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.