ನವದೆಹಲಿ: ಭಾರತದ ಆರ್ಥಿಕತೆಗೆ ಉತ್ತೇಜನ ನೀಡಲು ಹಲವಾರು ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಳ್ಳುತ್ತಿದೆ. ಇದರ ಭಾಗವಾಗಿ ಶುಕ್ರವಾರ ದೇಶೀಯ ಮತ್ತು ಹೊಸದಾಗಿ ಸ್ಥಾಪನೆಯಾಗುವ ಕಂಪನಿಗಳ ಮೇಲಿನ ಕಾರ್ಪೋರೇಟ್ ತೆರಿಗೆಯನ್ನು ಕಡಿತ ಮಾಡಲಾಗಿದೆ.
ಶೇ.30ರಷ್ಟಿದ್ದ ಕಾರ್ಪೋರೇಟ್ ತೆರಿಗೆ ದರವನ್ನು ಶೇ. 25.2ಕ್ಕೆ ಇಳಿಸಿರುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿದ್ದಾರೆ. ದೇಶೀಯ ಕಂಪೆನಿಗಳ ಮೇಲಿನ ಎಲ್ಲಾ ಸೆಸ್ ಮತ್ತು ಹೆಚ್ಚುವರಿ ಶುಲ್ಕ ಒಳಗೊಂಡಂತೆ ದೇಶೀಯ ಮತ್ತು ಹೊಸದಾಗಿ ಸ್ಥಾಪನೆಯಾಗುವ ಕಂಪನಿಗಳ ಮೇಲಿನ ಕಾರ್ಪೋರೇಟ್ ತೆರಿಗೆಯನ್ನು ಕಡಿತ ಮಾಡಲಾಗಿದೆ.
ಅಕ್ಟೋಬರ್ನಿಂದ ಆರಂಭವಾಗಲಿರುವ ಹೊಸ ಕಂಪನಿಗಳ ಮೇಲಿನ ಆದಾಯ ತೆರಿಗೆಯೂ ಶೇ. 15 ಕ್ಕೆ ಇಳಿಕೆ ಮಾಡಲಾಗಿದೆ. 2023ರ ಮಾರ್ಚ್ 31ರೊಳಗೆ ಸ್ಥಾಪನೆಯಾಗುವ ಕಂಪನಿಗಳಿಗೆ ಮಾತ್ರ ಇದು ಅನ್ವಯವಾಗಲಿದೆ.
ಪ್ರಸಕ್ತ ಹಣಕಾಸು ವರ್ಷ ಏಪ್ರಿಲ್ 1 ರಿಂದ ಹೊಸ ತೆರಿಗೆ ದರ ಅನ್ವಯವಾಗಲಿದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಕಾರ್ಪೊರೇಟ್ ತೆರಿಗೆ ಕಡಿತ ಮತ್ತು ಇತರ ಪರಿಹಾರ ಕ್ರಮಗಳಿಂದ ವಾರ್ಷಿಕವಾಗಿ 1.45 ಲಕ್ಷ ಕೋಟಿ ರೂಪಾಯಿ ಹಣ ಸಂಗ್ರಹವಾಗಲಿದ್ದು ಇದರಿಂದ ಕಂಪೆನಿಗಳ ಹೂಡಿಕೆ ಮತ್ತು ಬೆಳವಣಿಗೆಗೆ ಅನುಕೂಲವಾಗಲಿದೆ ಎಂದರು.
ಕೇಂದ್ರ ಸರ್ಕಾರದ ಕಾರ್ಪೊರೇಟ್ ತೆರಿಗೆ ಕಡಿತದಿಂದಾಗಿ ದೇಶೀಯ ಕಂಪೆನಿಗಳು ಯಾವುದೇ ಪ್ರೋತ್ಸಾಹ ಧನ ಅಥವಾ ರಿಯಾಯಿತಿ ಪಡೆದಿರದಿದ್ದರೆ ಶೇಕಡಾ 22ರಷ್ಟು ಕಾರ್ಪೋರೇಟ್ ತೆರಿಗೆ ಕಟ್ಟಬೇಕಾಗುತ್ತದೆ. ಆದಾಯ ತೆರಿಗೆ ಕಾಯ್ದೆ ಮತ್ತು ಹಣಕಾಸು ಕಾಯ್ದೆಯಲ್ಲಿನ ಬದಲಾವಣೆಯನ್ನು ಸರ್ಕಾರ ವಿಧೇಯಕ ಮೂಲಕ ತರಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.