ನವದೆಹಲಿ: ಭಾರತವನ್ನು ದೊಡ್ಡ ಉತ್ಪಾದನಾ ಕೇಂದ್ರವನ್ನಾಗಿಸಲು ನರೇಂದ್ರ ಮೋದಿ ಸರ್ಕಾರವು ಬದ್ಧವಾಗಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಾರ್ಪೋರೇಟ್ ತೆರಿಗೆ ದರವನ್ನು ಕಡಿತ ಮಾಡಿದ ಹಿನ್ನಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.
“ಕಾರ್ಪೋರೇಟ್ ತೆರಿಗೆ ದರ ಕಡಿತ ದೀರ್ಘ ಕಾಲದ ಬೇಡಿಕೆಯಾಗಿದೆ, ಇದೀಗ ಅದು ವಾಸ್ತವವಾಗಿದೆ. ಇದು ನಮ್ಮ ಉದ್ಯಮಿಗಳನ್ನು ಜಾಗತಿಕವಾಗಿ ಸ್ಪರ್ಧೆಯೊಡ್ಡುವಂತೆ ಮಾಡುತ್ತದೆ ಮತ್ತು ಸಂಭಾವ್ಯ ಹೂಡಿಕೆದಾರರಿಗೆ ನಮ್ಮ ಮಾರುಕಟ್ಟೆ ಹೆಚ್ಚು ಆಕರ್ಷಕವಾಗುವಂತೆ ಮಾಡುತ್ತದೆ” ಎಂದು ಶಾ ಹೇಳಿದ್ದಾರೆ.
“ಮೋದಿ ಸರ್ಕಾರ ಭಾರತವನ್ನು ದೊಡ್ಡ ಉತ್ಪಾದನಾ ಕೇಂದ್ರವನ್ನಾಗಿಸಲು ಕಟಿಬದ್ಧವಾಗಿದೆ. ಹಿಂದೆ ಘೋಷಿಸಿರುವ ಎಫ್ಡಿಐ ಸರಳೀಕರಣ ಮತ್ತು ಇಂದು ತೆಗೆದುಕೊಂಡ ಕಾರ್ಪೋರೇಟ್ ತೆರಿಗೆ ದರ ಕಡಿತ ಮಾರಾಟ ನಮ್ಮ ಉದ್ದೇಶಗಳನ್ನು ಈಡೇರಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ. ಮಹತ್ವದ ಕ್ರಮಗಳನ್ನು ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವರಿಗೆ ಅಭಿನಂದನೆಗಳು” ಎಂದಿದ್ದಾರೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ದೇಶೀಯ ಕಂಪನಿಗಳ ಮೇಲಿನ ಕಾರ್ಪೋರೇಟ್ ತೆರಿಗೆ ದರವನ್ನು ಶೇ.22ರಷ್ಟು ಮತ್ತು ಹೊಸ ಉತ್ಪಾದನಾ ಕಂಪನಿಗಳ ಮೇಲಿನ ತೆರಿಗೆಯನ್ನು ಶೇ. 15 ರಷ್ಟು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.