ಬೆಂಗಳೂರು: ವಿಶ್ವ ಹಿರಿಯರ ದಿನದ ನಿಮಿತ್ತ ಬೆಂಗಳೂರಿನ ಶ್ರೀ ಕಂಠೀರವ ಸ್ಟೇಡಿಯಂನಲ್ಲಿ ಶುಕ್ರವಾರ ಹಿರಿಯ ನಾಗರಿಕರಿಗಾಗಿ ಕ್ರೀಡಾ ಕೂಟವನ್ನು ಆಯೋಜನೆಗೊಳಿಸಲಾಗಿತ್ತು. ಸುಮಾರು 250 ಹಿರಿಯರು ಇಲ್ಲಿ 100-200 ಮೀಟರ್ ನಡಿಗೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಅಕ್ಟೋಬರ್ 1ರಂದು ವಿಶ್ವ ಹಿರಿಯರ ದಿನವನ್ನು ಆಚರಣೆ ಮಾಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರ ಹಿರಿಯರಿಗೆ ಕ್ರೀಡಾಕೂಟವನ್ನು ಆಯೋಜನೆಗೊಳಿಸಿದೆ. 71-80 ವರ್ಷದ ಹಿರಿಯರು ಇದರಲ್ಲಿ ಪಾಲ್ಗೊಂಡಿದ್ದರು.
200 ಮೀಟರ್ ಸ್ಪರ್ಧೆಯಲ್ಲಿ 72 ವರ್ಷದ ಲಲಿತಮ್ಮ ಅವರು ಮೊದಲ ಪ್ರಶಸ್ತಿಯನ್ನು ಗೆದ್ದರು, 100 ಮೀಟರ್ ನಡಿಗೆ ಸ್ಪರ್ಧೆಯಲ್ಲಿ 81 ವರ್ಷದ ಸರೋಜಮ್ಮ ಮೊದಲ ಸ್ಥಾನ ಪಡೆದುಕೊಂಡರು.
ನಿವೃತ್ತ ಶಾಲಾ ಪ್ರಾಂಶುಪಾಲೆಯಾಗಿರುವ ಲಲಿತಮ್ಮ ಅವರು ಅತಿ ದೂರ ಓಡುವ ಓಟಗಾರ್ತಿಯೂ ಹೌದು. ಈ ಹಿಂದೆ ಹಲವಾರು ಪ್ರಶಸ್ತಿಗಳನ್ನೂ ಇವರು ಜಯಿಸಿಕೊಂಡಿದ್ದರು. ಈಗಲೂ ನಿತ್ಯ 1 ಗಂಟೆ ನಡೆಯುವ ಇವರು ತಮ್ಮ ಆರೋಗ್ಯವನ್ನು ಚೆನ್ನಾಗಿ ಇಟ್ಟುಕೊಂಡಿದ್ದಾರೆ.
ಮಕ್ಕಳಿಂದ ದೌರ್ಜನ್ಯಕ್ಕೆ ಒಳಗಾಗಿರುವ ಸರೋಜಮ್ಮ ಅವರೂ 100 ಮೀಟರ್ ನಡಿಗೆಯಲ್ಲಿ ಗೆದ್ದು ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಂಡಿದ್ದಾರೆ.
ಕ್ರೀಡಾಕೂಟದಲ್ಲಿ ಪಾಲ್ಗೊಂಡಿರುವ ಹಿರಿಯರು ಒಂದಲ್ಲ ಒಂದು ಸಮಸ್ಯೆಯಿಂದ ಬಳಲುತ್ತಿದ್ದಾರೆ, ಈ ಸ್ಪರ್ಧೆಯಲ್ಲಿ ಭಾಗವಹಿಸಿ ಅವರಲ್ಲಿ ಸಕಾರಾತ್ಮಕ ಬದಲಾವಣೆಗಳಾಗುವ ನಂಬಿಕೆ ಇದೆ ಎಂದು ಆಯೋಜಕರೊಬ್ಬರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.