ನವದೆಹಲಿ: ಕೇಂದ್ರೀಯ ಚುನಾವಣಾ ಆಯೋಗವು ಶನಿವಾರ ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕವನ್ನು ಘೋಷಣೆ ಮಾಡಿದೆ.
ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಅಕ್ಟೋಬರ್ 21 ರಂದು ಚುನಾವಣೆ ನಡೆಯಲಿವೆ. ಒಂದೇ ಹಂತದಲ್ಲಿ ಎರಡೂ ರಾಜ್ಯಗಳಲ್ಲೂ ಚುನಾವಣೆ ಜರುಗುತ್ತಿದೆ. ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 4. ಅಕ್ಟೋಬರ್ 24ರಂದು ಫಲಿತಾಂಶ ಹೊರಬೀಳಲಿದೆ.
2019ರ ಲೋಕಸಭೆಯ ಬಳಿಕ ನಡೆಯುತ್ತಿರುವ ಮೊದಲ ರಾಜ್ಯ ಚುನಾವಣೆ ಇದಾಗಿದೆ. ಎರಡೂ ರಾಜ್ಯಗಳಲ್ಲೂ ಬಿಜೆಪಿ ಅಧಿಕಾರದಲ್ಲಿದೆ. ಹರಿಯಾಣದಲ್ಲಿ ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಬಿಜೆಪಿ ಸರ್ಕಾರವಿದೆ. ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವಿಸ್ ನೇತೃತ್ವದ ಬಿಜೆಪಿ ಸರ್ಕಾರವಿದೆ. ಎರಡರಲ್ಲೂ ಮತ್ತೊಂದು ಅವಧಿಗೆ ಅಧಿಕಾರದ ಗದ್ದುಗೆಯನ್ನು ಏರಲು ಬಿಜೆಪಿ ಪ್ರಯತ್ನ ಆರಂಭಸಿದೆ.
ಎರಡೂ ರಾಜ್ಯಗಳನ್ನು ಗೆಲ್ಲುವುದು ಬಿಜೆಪಿಗೆ ಪ್ರತಿಷ್ಠೆಯ ವಿಷಯವಾದರೆ, ಕಾಂಗ್ರೆಸ್ ಈ ರಾಜ್ಯಗಳಲ್ಲಿ ಗೆಲ್ಲುವುದು ಅಸ್ತಿತ್ವದ ಪ್ರಶ್ನೆಯಾಗಿದೆ. ಇಲ್ಲಿ ಗೆದ್ದು ತನ್ನ ಅಸ್ತಿತ್ವವನ್ನು ಸಾಬೀತುಪಡಿಸಲು ಅದು ಶತಾಯ ಗತಾಯ ಪ್ರಯತ್ನ ನಡೆಸಲಿದೆ.
ಮಹಾರಾಷ್ಟ್ರದಲ್ಲಿ 8.94 ಕೋಟಿ ನೋಂದಾಯಿತ ಮತದಾರರಿದ್ದರೆ, ಹರಿಯಾಣದಲ್ಲಿ 1.82 ಕೋಟಿ ನೋಂದಾಯಿತ ಮತದಾರರಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.