ಬೆಂಗಳೂರು: ಕರ್ನಾಟಕದ 15 ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 21ರಂದು ಉಪಚುನಾವಣೆ ಘೋಷಣೆಯಾಗಿದೆ. ಅನರ್ಹ ಶಾಸಕರ ಕ್ಷೇತ್ರಗಳಿಗೆ ಉಪಚುನಾವಣೆ ಜರುಗುತ್ತಿದೆ.
ಅಥಣಿ, ಕಾಗವಾಡ, ಗೋಕಾಕ್, ಯಲ್ಲಾಪುರ, ಹಿರೆಕೆರೂರು, ರಾಣೆಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆ.ಆರ್. ಪುರ, ಯಶವಂತಪುರ, ಮಹಾಲಕ್ಷೀ ಲೇಔಟ್, ಶಿವಾಜಿನಗರ, ಹೊಸಕೋಟೆ, ಕೃಷ್ಣರಾಜಪೇಟೆ, ಹುಣಸೂರು ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಲಿವೆ.
ಅ. 24 ಕ್ಕೆ ಫಲಿತಾಂಶ ಪ್ರಕಟವಾಗಲಿದೆ, ಸೆ. 30 ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನ ಮತ್ತು ಅ.3 ಕ್ಕೆ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.
ಕರ್ನಾಟಕದ ಒಟ್ಟು 17 ಕ್ಷೇತ್ರಗಳಿಗೆ ಉಪಚುನಾವಣೆ ಜರುಗಬೇಕಿತ್ತು. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ಕ್ಷೇತ್ರದಲ್ಲಿ ಚುನಾವಣೆಗೆ ನ್ಯಾಯಾಲಯ ತಡೆ ನೀಡಿದೆ. ಈ ಹಿನ್ನಲೆಯಲ್ಲಿ 15 ಕ್ಷೇತ್ರಗಳಿಗೆ ಮಾತ್ರ ಚುನಾವಣೆ ಜರುಗುತ್ತಿದೆ.
ಬಿಹಾರದ ಸಮಸ್ತೀಪುರ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. ಅರುಣಾಚಲ ಪ್ರದೇಶದ 1 ವಿಧಾನಸಭಾ ಕ್ಷೇತ್ರ, ಅಸ್ಸಾಂನ 4, ಬಿಹಾರದ 5, ಛತ್ತೀಸ್ಗಢದ 1, ಗುಜರಾತಿನ 4, ಹಿಮಾಚಲ ಪ್ರದೇಶದ 2, ಕೇರಳದ 5, ಮಧ್ಯಪ್ರದೇಶದ 1, ಮೇಘಾಲಯದ 1, ಒರಿಸ್ಸಾದ 1, ಪಂಜಾಬಿನ 4, ರಾಜಸ್ಥಾನದ 2, ಸಿಕ್ಕಿಂನ 3, ತಮಿಳುನಾಡಿನ 2, ತೆಲಂಗಾಣದ 1, ಉತ್ತರಪ್ರದೇಶದ 11 ವಿಧಾನಸಭಾ ಕ್ಷೇತ್ರಗಳಿಗೂ ಅಕ್ಟೋಬರ್ 21ರಂದೇ ಉಪಚುನಾವಣೆ ಜರುಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.