ನವದೆಹಲಿ: ದೇಶದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಅನ್ನು ನಿಷೇಧ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರು ಈಗಾಗಲೇ ಕರೆಯನ್ನು ನೀಡಿದ್ದಾರೆ. ಅದರಂತೆ ಶನಿವಾರ ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳಿಗೆ ಚುನಾವಣೆಯನ್ನು ಘೋಷಣೆ ಮಾಡಿರುವ ಚುನಾವಣಾ ಆಯೋಗವೂ, ಪ್ಲಾಸ್ಟಿಕ್ ಮತ್ತು ಪಾಲಿಥಿನ್ ವಸ್ತುಗಳನ್ನು ಪ್ರಚಾರ ಕಾರ್ಯದ ವೇಳೆ ಬಳಕೆ ಮಾಡದಂತೆ ರಾಜಕೀಯ ಪಕ್ಷಗಳಿಗೆ ಮತ್ತು ನೇತಾರರಿಗೆ ಕರೆಯನ್ನು ನೀಡಿದೆ.
ಪ್ಲಾಸ್ಟಿಕ್ ಮತ್ತು ಪಾಲಿಥಿನ್ ವಸ್ತುಗಳು ಪರಿಸರಕ್ಕೆ ತೀವ್ರ ಸ್ವರೂಪದಲ್ಲಿ ಹಾನಿಯನ್ನುಂಟುಮಾಡುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಚುನಾವಣಾ ಆಯೋಗವು ಪ್ರಸಾರ ಕಾರ್ಯದಲ್ಲಿ ಪ್ಲಾಸ್ಟಿಕ್ ಮತ್ತು ಪಾಲಿಥಿನ್ನಿಂದ ತಯಾರಿಸಲ್ಪಟ್ಟ ವಸ್ತುಗಳನ್ನು ಬಳಕೆ ಮಾಡದಂತೆ ರಾಜಕೀಯ ಪಕ್ಷಗಳಿಗೆ ಸೂಚನೆಯನ್ನು ನೀಡಿದೆ.
ಎರಡು ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕವನ್ನು ಘೋಷಣೆ ಮಾಡುವ ಸಲುವಾಗಿ ಶನಿವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರ ಅವರು, ಪ್ರಚಾರ ಕಾರ್ಯದ ವೇಳೆ ಎಲ್ಲಾ ರಾಜಕೀಯ ಪಕ್ಷಗಳು ಪರಿಸರ ಸ್ನೇಹಿಯಾದ ವಸ್ತುಗಳನ್ನು ಬಳಕೆ ಮಾಡಬೇಕು ಎಂದು ಮನವಿ ಮಾಡಿಕೊಳ್ಳುತ್ತೇವೆ ಎಂದಿದ್ದಾರೆ.
ಜಿಲ್ಲಾ ಚುನಾವಣಾ ಅಧಿಕಾರಿಗಳು ಮತ್ತು ರಿಟರ್ನಿಂಗ್ ಆಫೀಸರ್ಗಳು ಎಲ್ಲ ರಾಜಕೀಯ ಪಕ್ಷಗಳು ಪರಿಸರ ಸ್ನೇಹಿಯಾದ ವಸ್ತುಗಳನ್ನೇ ಪ್ರಚಾರ ಕಾರ್ಯದ ವೇಳೆ ಬಳಕೆ ಮಾಡುತ್ತಿವೆ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ನಿಯಮವನ್ನು ಉಲ್ಲಂಘಿಸಿದರೆ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಸುನೀಲ್ ಅರೋರ ಸೂಚನೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.