ನವದೆಹಲಿ : ಏಷ್ಯನ್ ಗೇಮ್ಸ್ ಬಂಗಾರ ಪದಕ ವಿಜೇತ ಭಾರತೀಯ ಅಮಿತ್ ಪಂಗಲ್ ಅವರು ವಿಶ್ವ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಪದಕವನ್ನು ಜಯಿಸಿದ್ದಾರೆ. ಸಾಧನೆಯನ್ನು ಮಾಡಿದ ಭಾರತದ ಮೊದಲ ಪುರುಷ ಬಾಕ್ಸರ್ ಎನಿಸಿಕೊಂಡಿದ್ದಾರೆ.
ರಷ್ಯಾದ ಎಕಟರಿಂನ್ ಬರ್ಗ್ನಲಿ ಜರುಗಿದ ವಿಶ್ವ ಪುರುಷ ಬಾಕ್ಸಿಂಗ್ ಚಾಂಪಿಯನ್ಶಿಪ್ನ ಫೈನಲ್ ಪಂದ್ಯದಲ್ಲಿ ಅಮಿತ್ ಅವರು ಉಜ್ಬೇಕಿಸ್ತಾನದ ಶಹಾಬುದ್ದೀನ್ ಝೈರೋ ಅವರ ವಿರುದ್ಧ 0-5 ರಲ್ಲಿ ಪರಾಭವಗೊಂಡರು. ಈ ಮೂಲಕ ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟುಕೊಂಡರು.
ಏಷಿಯನ್ ಗೇಮ್ಸ್ ಮತ್ತು ಏನ್ ಚಾಂಪಿಯನ್ಶಿಪ್ನಲ್ಲಿ ಬಂಗಾರದ ಸಾಧನೆಯನ್ನು ಮಾಡಿರುವ ಅಮಿತ್ ಪಂಗಲ್ ಅವರು, ಇದೀಗ ವಿಶ್ವ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿಯ ಸಾಧನೆಯನ್ನು ಮಾಡಿದ್ದಾರೆ. ಈ ಸಾಧನೆಯ ಮೂಲಕ ಅವರು 2020 ರ ಒಲಿಂಪಿಕ್ಸ್ಗೆ ಅರ್ಹತೆಯನ್ನು ಗಿಟ್ಟಿಸಿಕೊಂಡಿದ್ದಾರೆ.
ವಿಶ್ವ ಬಾಕ್ಸಿಂಗ್ ಚಾಂಪಿಯನ್ಶಿಪ್ ಶನಿವಾರ ಸಮಾಪನಗೊಂಡಿದೆ. ಇದರಲ್ಲಿ ಭಾರತಕ್ಕೆ ಒಂದು ಬೆಳ್ಳಿ ಮತ್ತು ಕಂಚಿನ ಪದಕ ಪ್ರಾಪ್ತವಾಗಿದೆ. ಇದೇ ಮೊದಲ ಬಾರಿಗೆ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್ನಲ್ಲಿ ಭಾರತ ಎರಡು ಪದಕಗಳನ್ನು ಜಯಿಸುತ್ತಿರುವುದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.