ಲಕ್ನೋ: ಉತ್ತರಪ್ರದೇಶ ರಾಜ್ಯದ ಪ್ರತಿ ಎರಡು ಜಿಲ್ಲೆಗಳಿಗೆ ಕನಿಷ್ಠ ಒಂದು ವೈದ್ಯಕೀಯ ಕಾಲೇಜು ನೀಡಲು ತಮ್ಮ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. 2020 ರಿಂದ ಇನ್ನೂ 15 ಹೊಸ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಹೇಳಿದ್ದಾರೆ.
“1947 ರಿಂದ 2016 ರವರೆಗೆ ರಾಜ್ಯದಲ್ಲಿ 12 ಸರ್ಕಾರಿ ವೈದ್ಯಕೀಯ ಕಾಲೇಜುಗಳು ಇದ್ದವು. ನಮ್ಮ ಸರ್ಕಾರವು 2016-19ರ ನಡುವೆ 15 ಹೊಸ ವೈದ್ಯಕೀಯ ಕಾಲೇಜುಗಳನ್ನು, 2 ಏಮ್ಸ್, ಕ್ಯಾನ್ಸರ್ ಇನ್ಸ್ಟಿಟ್ಯೂಟ್ ನಿರ್ಮಾಣವನ್ನು ಕೈಗೆತ್ತಿಕೊಂಡಿದೆ. ನಾವು ಈಗಾಗಲೇ ಅಸ್ತಿತ್ವದಲ್ಲಿರುವ ವೈದ್ಯಕೀಯ ಕಾಲೇಜುಗಳಿಗೆ ಸೂಪರ್-ಸ್ಪೆಷಾಲಿಟಿ ಬ್ಲಾಕ್ಗಳನ್ನು ಸೇರಿಸುತ್ತಿದ್ದೇವೆ” ಎಂದು ಆದಿತ್ಯನಾಥ್ ಹೇಳಿದ್ದಾರೆ.
“ನಾವು ಹೆಚ್ಚುವರಿಯಾಗಿ 15 ಹೊಸ ವೈದ್ಯಕೀಯ ಕಾಲೇಜುಗಳ ಕೆಲಸವನ್ನು ಪ್ರಾರಂಭಿಸಿದ್ದೇವೆ. ಈಗಾಗಲೇ 15 ಕಾಲೇಜುಗಳ ಕಾಮಗಾರಿಯನ್ನು ಮುಗಿಸುವ ಹಂತಕ್ಕೆ ಬಂದಿದ್ದೇವೆ, ಇವುಗಳ ಪೈಕಿ 7 ಕಾಲೇಜುಗಳು ಈ ವರ್ಷದಿಂದಲೇ ಪ್ರವೇಶವನ್ನು ಪ್ರಾರಂಭಿಸಿವೆ” ಎಂದು ಸೋಮವಾರ ಲಕ್ನೋದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಆದಿತ್ಯನಾಥ್ ಹೇಳಿದ್ದಾರೆ.
“ನಾವು ಸ್ಥಾಪಿಸಿದ ಈ 7 ಹೊಸ ವೈದ್ಯಕೀಯ ಕಾಲೇಜುಗಳಲ್ಲಿ 700 ವಿದ್ಯಾರ್ಥಿಗಳು ಎಂಬಿಬಿಎಸ್ ಓದುತ್ತಿದ್ದಾರೆ. ಈ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಪಡೆದು ಹೊರಬಂದಾಗ ಅವರು ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೌಲಭ್ಯವನ್ನು ಹೆಚ್ಚಿಸುತ್ತಾರೆ. ಉತ್ತರಪ್ರದೇಶದ ಎರಡು ಜಿಲ್ಲೆಗಳಿಗೆ ಕನಿಷ್ಠ ಒಂದು ವೈದ್ಯಕೀಯ ಕಾಲೇಜು ನೀಡಲು ನಾವು ಯೋಜಿಸುತ್ತಿದ್ದೇವೆ” ಎಂದಿದ್ದಾರೆ.
ಪ್ರಧಾನ್ ಮಂತ್ರಿ ಜನ ಆರೋಗ್ಯ ಯೋಜನೆ ಅಡಿಯಲ್ಲಿ 1.18 ಲಕ್ಷಕ್ಕೂ ಹೆಚ್ಚು ಕುಟುಂಬಗಳು ನೋಂದಾಯಿತಗೊಂಡಿದ್ದು, ರಾಜ್ಯದಲ್ಲಿ 6 ಕೋಟಿಗೂ ಹೆಚ್ಚು ಜನರಿಗೆ ಇದರಿಂದ ಅನುಕೂಲವಾಗಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.