ನ್ಯೂಯಾರ್ಕ್: ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ನ್ಯೂಯಾರ್ಕ್ ನಗರದಲ್ಲಿನ ವಿಶ್ವಸಂಸ್ಥೆಯ ಪ್ರಧಾನ ಕಛೇರಿಯಲ್ಲಿ 50 ಕಿಲೊವ್ಯಾಟ್ ‘ಗಾಂಧಿ ಸೋಲಾರ್ ಪಾರ್ಕ್’ ಅನ್ನು ಲೋಕಾರ್ಪಣೆಗೊಳಿಸಿದರು.
ಈ ಸಂದರ್ಭದಲ್ಲಿ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಮತ್ತು ದಕ್ಷಿಣ ಕೊರಿಯಾದ ಅಧ್ಯಕ್ಷ ಮೂನ್ ಜೇ ಇನ್ ಸೇರಿದಂತೆ ಅನೇಕ ವಿಶ್ವನಾಯಕರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿಶ್ವಸಂಸ್ಥೆಯ ಕೇಂದ್ರ ಕಛೇರಿಯಲ್ಲಿ ‘ಪ್ರಸ್ತುತ ಕಾಲಘಟ್ಟದಲ್ಲಿ ಮಹಾತ್ಮ ಗಾಂಧೀಜಿಯವರ ಪ್ರಸ್ತುತತೆ’ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು, ಇದರಲ್ಲಿ ನಾಯಕರುಗಳು ವಿಶ್ವಸಂಸ್ಥೆಯ ಮಹಾತ್ಮ ಗಾಂಧಿ ಅಂಚೆ ಚೀಟಿಯನ್ನು ಬಿಡುಗಡೆಗೊಳಿಸಿದರು.
ಮಹಾತ್ಮ ಗಾಂಧಿಯವರ 150 ನೇ ಜನ್ಮ ದಿನಾಚರಣೆಯನ್ನು ಆಚರಿಸುವ ಸಲುವಾಗಿ ಮತ್ತು ಇಂದಿನ ಜಗತ್ತಿನಲ್ಲಿ ಗಾಂಧಿವಾದಿ ಆಲೋಚನೆಗಳು ಮತ್ತು ಮೌಲ್ಯಗಳ ನಿರಂತರ ಪ್ರಸ್ತುತತೆಯನ್ನು ಒತ್ತಿಹೇಳುವ ಸಲುವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರು ಸೇರಿಂದತೆ ಹಲವಾರು ರಾಷ್ಟ್ರ ಮತ್ತು ಸರ್ಕಾರಗಳ ಮುಖ್ಯಸ್ಥರು ಗಾಂಧೀಜಿಗೆ ಸಾಮೂಹಿಕ ಗೌರವ ಸಲ್ಲಿಸಿದರು ಮತ್ತು ಅವರ ಸಂದೇಶದ ಮಹತ್ವವನ್ನು ಒತ್ತಿಹೇಳಿದರು.
ಗಾಂಧಿಯ 150 ನೇ ಜನ್ಮ ದಿನಾಚರಣೆಯ ಗೌರವಾರ್ಥ ಪ್ರಧಾನಿ ‘ಗಾಂಧಿ ಪೀಸ್ ಗಾರ್ಡನ್’ ಅನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಲಾಂಗ್ ಐಲ್ಯಾಂಡ್ನ ಓಲ್ಡ್ ವೆಸ್ಟ್ಬರಿಯಲ್ಲಿರುವ ಸ್ಟೇಟ್ ಯೂನಿವರ್ಸಿಟಿ ಆಫ್ ನ್ಯೂಯಾರ್ಕ್ ಕ್ಯಾಂಪಸ್ನಲ್ಲಿ ಈ ಗಾರ್ಡನ್ ಸ್ಥಾಪನೆ ಮಾಡಲಾಗಿದೆ. ಇದರಲ್ಲಿ ಈಗಾಗಲೇ 150 ಗಿಡಗಳನ್ನು ನೆಡಲಾಗಿದೆ.
ಅಮೆರಿಕಾ ಭೇಟಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ವಿಶ್ವದ ಹಲವು ನಾಯಕರೊಂದಿಗೆ ದ್ವಿಪಕ್ಷೀಯ ಮತ್ತು ಬಹುಪಕ್ಷೀಯ ಮಾತುಕತೆಗಳನ್ನು ನಡೆಸಿದ್ದಾರೆ.
The world comes together to pay homage to Mahatma Gandhi on his 150th birth anniversary!
I thank all those who came for the special programme at the @UN on the relevance of Gandhian thoughts.
In the august presence of various world leaders, a stamp on Gandhi Ji was released. pic.twitter.com/oAq5MOrrKF
— Narendra Modi (@narendramodi) September 24, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.