ನವದೆಹಲಿ: ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಅವರಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವ್ಡೇಕರ್ ಮಂಗಳವಾರ ಘೋಷಣೆ ಮಾಡಿದ್ದಾರೆ.
“ಲೆಜೆಂಡರಿ ಅಮಿತಾಭ್ ಬಚ್ಚನ್ ಅವರು ಎರಡು ತಲೆಮಾರುಗಳನ್ನು ಮನೋರಂಜಿಸಿದ್ದಾರೆ ಮತ್ತು ಸ್ಫೂರ್ತಿ ತುಂಬಿದ್ದಾರೆ. ಅವರನ್ನು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಈ ಆಯ್ಕೆಗೆ ಇಡೀ ದೇಶ ಮತ್ತು ಅಂತಾರಾಷ್ಟ್ರೀಯ ಸಮುದಾಯವು ಸಂತೋಷವಾಗಿದೆ. ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು” ಎಂದು ಜಾವ್ಡೇಕರ್ ಟ್ವಿಟ್ ಮಾಡಿದ್ದಾರೆ.
The legend Amitabh Bachchan who entertained and inspired for 2 generations has been selected unanimously for #DadaSahabPhalke award. The entire country and international community is happy. My heartiest Congratulations to him.@narendramodi @SrBachchan pic.twitter.com/obzObHsbLk
— Prakash Javadekar (@PrakashJavdekar) September 24, 2019
50 ವರ್ಷಗಳ ಕಾಲ ಸಿನಿಮಾ ರಂಗಕ್ಕೆ ಸೇವೆ ಸಲ್ಲಿಸಿರುವ ಅಮಿತಾಭ್ ಅವರಿಗೆ ಈ ಅತ್ಯುನ್ನತವಾದ ಗೌರವ ಸಲ್ಲಿಕೆಯಾಗುತ್ತಿದೆ. ಭಾರತೀಯ ಸಿನಿಮಾಗೆ ಅಭೂತಪೂರ್ವ ಕೊಡುಗೆ ನೀಡಿದವರಿಗೆ ಮತ್ತು ಅದರ ಪ್ರಗತಿಗೆ ಶ್ರಮಿಸಿದವರಿಗೆ ಪುರಸ್ಕಾರವಾಗಿ ಈ ಪ್ರಶಸ್ತಿಯನ್ನು ಪ್ರದಾನಿಸಲಾಗುತ್ತದೆ.
1966ರಿಂದ ಈ ಪ್ರಶಸ್ತಿಯನ್ನು ನೀಡುತ್ತಾ ಬರಲಾಗುತ್ತಿದ್ದು, ವಾರ್ಷಿಕವಾಗಿ ನ್ಯಾಷನಲ್ ಫಿಲ್ಮ್ ಅವಾರ್ಡ್ ಸೊಸೈಟಿ ಇದನ್ನು ಪ್ರದಾನಿಸುತ್ತದೆ.
ಅಮಿತಾಬ್ ಬಚ್ಚನ್ ಅವರು ಸಾರ್ವಕಾಲಿಕ ಶ್ರೇಷ್ಠ ಚಲನಚಿತ್ರ ನಟರಲ್ಲಿ ಒಬ್ಬರೆಂದು ಗುರುತಿಸಲ್ಪಟ್ಟಿದ್ದಾರೆ. ಶೋಲೆ, ದೀವರ್, ಜಂಜೀರ್ ಮುಂತಾದ ಅದ್ಭುತ ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ಪ್ರಸ್ತುತ ಅವರು ಕೌನ್ ಬನೇಗಾ ಕರೋಡ್ಪತಿ ಎಂಬ ಜನಪ್ರಿಯ ಟಿವಿ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದಾರೆ.
ಪದ್ಮಶ್ರೀ, ಪದ್ಮಭೂಷಣ್ ಮತ್ತು ಪದ್ಮವಿಭೂಷಣದಂತಹ ವಿವಿಧ ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಅವರು, ದೇಶದಾದ್ಯಂತ ಅನೇಕ ಅಭಿಮಾನಿಗಳನ್ನು ಹೊಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.