ನ್ಯೂಯಾರ್ಕ್: ಭಾರತದಿಂದ ಪರಾರಿಯಾಗಿರುವ ಬಿಲಿಯನೇರ್ ಮೆಹುಲ್ ಚೋಕ್ಸಿ ಒಬ್ಬ ವಂಚಕ ಮತ್ತು ಆತನನ್ನು ಭಾರತಕ್ಕೆ ಮರಳಿ ಹಸ್ತಾಂತರಿಸಲಾಗುತ್ತದೆ ಎಂದು ಆ್ಯಂಟಿಗುವಾ ಮತ್ತು ಬಾರ್ಬುಡಾದ ಪ್ರಧಾನ ಮಂತ್ರಿ ಗ್ಯಾಸ್ಟನ್ ಬ್ರೌನ್ ಹೇಳಿದ್ದಾರೆ. ಅವರ ಈ ಹೇಳಿಕೆ ಭಾರತಕ್ಕೆ ಸಿಕ್ಕ ಅತೀದೊಡ್ಡ ರಾಜತಾಂತ್ರಿಕ ಜಯವಾಗಿದೆ.
“ಚೋಕ್ಸಿಯ ಎಲ್ಲಾ ಮನವಿಗಳನ್ನು ತಿರಸ್ಕರಿಸಿದ ಬಳಿಕ ಅವರನ್ನು ಗಡೀಪಾರು ಮಾಡಲಾಗುವುದು ಎಂದು ನಾನು ಭರವಸೆ ನೀಡುತ್ತೇನೆ. ಅವರ ವಿರುದ್ಧದ ಆರೋಪಗಳನ್ನು ಎದುರಿಸಲು ಅವರನ್ನು ಮತ್ತೆ ಭಾರತಕ್ಕೆ ಹಸ್ತಾಂತರಿಸಲಾಗುವುದು” ಗ್ಯಾಸ್ಟನ್ ಬ್ರೌನ್ ನ್ಯೂಯಾರ್ಕ್ನಲ್ಲಿ ಭಾರತಕ್ಕೆ ಭರವಸೆಯನ್ನು ನೀಡಿದ್ದಾರೆ.
ತನ್ನ ದೇಶದಲ್ಲಿ ತಲೆಮರೆಸಿಕೊಂಡಿರುವ ಈ ವಂಚಕ ಉದ್ಯಮಿಯನ್ನು ವಿಚಾರಣೆ ನಡೆಸಲು ಭಾರತೀಯ ತನಿಖಾಧಿಕಾರಿಗಳು ಮುಕ್ತ ಅವಕಾಶವನ್ನು ಹೊಂದಿದ್ದಾರೆ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.
ಬ್ರೌನ್ ಅವರ ಈ ಹೇಳಿಕೆ ನೀರವ್ ಮೋದಿ ಮತ್ತು ಚೋಕ್ಸಿ ನಾಪತ್ತೆ ವಿಚಾರದಲ್ಲಿ ಭಾರತಕ್ಕೆ ಸಿಕ್ಕಿರುವ ಅತೀ ದೊಡ್ಡ ರಾಜತಾಂತ್ರಿಕ ಜಯ ಬಣ್ಣಿಸಲಾಗುತ್ತಿದೆ. ಖಾಸಗಿ ಟಿವಿ ಚಾನೆಲೊಂದಕ್ಕೆ ನೀಡಿದ ಸಂದರ್ಶನದಲ್ಲಿ ಆ್ಯಂಟಿಗುವಾ ಮತ್ತು ಬಾರ್ಬುಡಾ ಪ್ರಧಾನಿ ಗ್ಯಾಸ್ಟನ್ ಬ್ರೌನ್ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಮೆಹುಲ್ ಚೋಕ್ಸಿ ಭಾರತದಲ್ಲಿ ರೂ. 13,500 ಕೋಟಿ ಮೊತ್ತದ ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದಲ್ಲಿ ಭಾಗಿಯಾಗಿದ್ದಾರೆ. ಭಾರತದಿಂದ ಪರಾರಿಯಾಗಿರುವ ಇವರಿಗೆ 2018 ರ ಜನವರಿಯಲ್ಲಿ ಕೆರಿಬಿಯನ್ ರಾಷ್ಟ್ರದಲ್ಲಿ ಪೌರತ್ವ ನೀಡಲಾಯಿತು.
“ಮೆಹುಲ್ ಚೋಕ್ಸಿ ಆ್ಯಂಟಿಗುವಾ ಮತ್ತು ಬಾರ್ಬುಡಾ ದೇಶಕ್ಕೆ ಯಾವುದೇ ಘನತೆಯನ್ನು ತರುವುದಿಲ್ಲ” ಎಂದು ಗ್ಯಾಸ್ಟನ್ ಬ್ರೌನ್ ಹೇಳಿದ್ದಾರೆ.
ಮೆಹುಲ್ ಚೋಕ್ಸಿ ಗಡಿಪಾರಿಗೆ ಪ್ರಧಾನಿ ಬ್ರೌನ್ ಯಾವುದೇ ಕಾಲಮಿತಿಯನ್ನು ಘೋಷಣೆ ಮಾಡಿಲ್ಲ, ಆದರೆ ನ್ಯಾಯಾಂಗ ಪ್ರಕ್ರಿಯೆಗಳ ಆಧಾರದಲ್ಲಿ ಅವರ ಗಡಿಪಾರು ನಿಶ್ಚಿತ ಎಂದು ಅವರು ಭರವಸೆಯನ್ನು ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.