ನವದೆಹಲಿ: ಕರ್ನಾಟಕದಲ್ಲಿ ಘೋಷಣೆಯಾಗಿದ್ದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸುಪ್ರೀಂಕೋರ್ಟ್ ಗುರುವಾರ ತಡೆಯಾಜ್ಞೆಯನ್ನು ನೀಡಿದೆ. ಇದರಿಂದ ಅನರ್ಹ ಶಾಸಕರಿಗೆ ಅತೀದೊಡ್ಡ ರಿಲೀಫ್ ಸಿಕ್ಕಿದೆ.
ಈ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 22 ಕ್ಕೆ ಮುಂದೂಡಲಾಗಿದೆ. ವಿಚಾರಣೆ ಪೂರ್ಣವಾಗಿ ತೀರ್ಪು ಬಂದ ಬಳಿಕವೇ ಚುನಾವಣೆಯನ್ನು ಘೋಷಿಸಲು ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠದಿಂದ ನಿರ್ಧಾರ ಪ್ರಕಟಿಸಲಾಗಿದೆ.
ಚುನಾವಣಾ ಆಯೋಗ ಸುಪ್ರೀಂಕೋರ್ಟ್ ಆದೇಶಕ್ಕೆ ಸಮ್ಮತಿಯನ್ನು ಸೂಚಿಸಿದ್ದು, ತೀರ್ಪು ಬಂದ ಬಳಿಕವೇ ಉಪಚುನಾವಣೆ ದಿನಾಂಕ ಘೋಷಿಸುವುದಾಗಿ ಹೇಳಿದೆ.
ಸುಪ್ರೀಂ ಕೋರ್ಟ್ ಉಪಚುನಾವಣೆಯನ್ನು ಮುಂದೂಡಿದ ಕ್ರಮವನ್ನು ಅನರ್ಹ ಶಾಸಕರು ಸ್ವಾಗತಿಸಿದ್ದಾರೆ.
ಅನರ್ಹ ಶಾಸಕರು ಹಾಕಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಆರಂಭಿಸಿದ್ದು, ಕಾಂಗ್ರೆಸ್ ಪಕ್ಷದ ಪರವಾಗಿ ಕಪಿಲ್ ಸಿಬಲ್ ಅವರು ವಾದ ಮಂಡಿಸಿದ್ದಾರೆ. ಸ್ಪೀಕರ್ ಪರ ವಾದವನ್ನು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.