ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ನೂತನ ಕೇಂದ್ರವನ್ನು ಸ್ಥಾಪನೆ ಮಾಡುವ ಸಲುವಾಗಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಓ) ಜಮ್ಮುವಿನ ಕೇಂದ್ರೀಯ ವಿಶ್ವವಿದ್ಯಾಲಯದೊಂದಿಗೆ ಒಪ್ಪಂದವನ್ನು ಮಾಡಿಕೊಂಡಿದೆ.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಜಮ್ಮು ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಹೊಸ ವಿಜ್ಞಾನ ಮತ್ತು ತಂತ್ರಜ್ಞಾನ ಕೇಂದ್ರದ ಸ್ಥಾಪನೆಯಾಗಲಿದೆ.
ಈ ಕೇಂದ್ರಕ್ಕೆ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ನೇತೃತ್ವದಲ್ಲಿ ಕಲಾಂ ಸೆಂಟರ್ ಫಾರ್ ಸೈನ್ಸ್ ಆ್ಯಂಡ್ ಟೆಕ್ನಾಲಜಿ ಎಂದು ನಾಮಕರಣ ಮಾಡಲು ನಿರ್ಧರಿಸಲಾಗಿದೆ.
“ಕಂಪ್ಯೂಟೇಶನಲ್ ಸಿಸ್ಟಮ್ ಸೆಕ್ಯುರಿಟಿ ಮತ್ತು ಸೆನ್ಸಾರ್ ಮುಂತಾದ ಸಂಶೋದನೆಗಳಲ್ಲಿ ಅನ್ವಯಿಕ ಸಂಶೋಧನೆ ಮತ್ತು ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುವುದು ಮತ್ತು ಸುಗಮಗೊಳಿಸುವುದು ಇದರ ಉದ್ದೇಶವಾಗಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಧಿಕಾರಿಗಳ ಪ್ರಕಾರ, ಕೇಂದ್ರವು ಅತ್ಯಾಧುನಿಕ ಸೌಲಭ್ಯಗಳು ಮತ್ತು ಉಪಕರಣಗಳನ್ನು ಹೊಂದಿದ್ದು, ಈ ಪ್ರದೇಶದ ಸಂಶೋಧನಾ ವಿದ್ವಾಂಸರ ಸಂಖ್ಯೆಯನ್ನು ಹೆಚ್ಚಿಸಲು ಸಹಾಯ ಮಾಡಲಿದೆ.
ಈ ಕೇಂದ್ರವನ್ನು ಶೀಘ್ರದಲ್ಲೇ ವಿಶ್ವ ದರ್ಜೆಯ ಸೌಲಭ್ಯವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಡಿಆರ್ಡಿಒ ಅಧ್ಯಕ್ಷ ಜಿ.ಸತೀಶ್ ರೆಡ್ಡಿ ಹೇಳಿದ್ದಾರೆ.
ಗುಣಮಟ್ಟದ ಸಂಶೋಧನೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಉನ್ನತ ಮಟ್ಟದ ಸಂಶೋಧನಾ ಕೇಂದ್ರವನ್ನು ಸ್ಥಾಪಿಸುವಲ್ಲಿ ಡಿಆರ್ಡಿಒ ಮಾಡುವ ಪ್ರಯತ್ನಗಳು ದೀರ್ಘಾವಧಿಯಲ್ಲಿ ಈ ಪ್ರದೇಶದಲ್ಲಿ ವಿಜ್ಞಾನಿಗಳ ಸಮುದಾಯವನ್ನು ಸೃಷ್ಟಿಸಲಿದೆ ಎಂದು ಮಾಜಿ ರಾಜತಾಂತ್ರಿಕ, ಜಮ್ಮು ವಿಶ್ವವಿದ್ಯಾಲಯ ಚಾನ್ಸೆಲರ್ ಜಿ ಪಾರ್ಥಸಾರಥಿ ಅಭಿಪ್ರಾಯಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.