ನವದೆಹಲಿ: ಇತ್ತೀಚಿಗೆ ನಡೆದ ಕುಸ್ತಿ ವಿಶ್ವ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಪದಕ ಮುಡಿಗೇರಿಸಿಕೊಂಡಿರುವ ಭಾರತದ ಉದಯೋನ್ಮುಖ ಕುಸ್ತಿಪಟು ದೀಪಕ್ ಪುನಿಯಾ ಅವರು 86 ಕೆಜಿ ತೂಕದ ಫ್ರೀಸ್ಟೈಲ್ ಪುರುಷರ ಕುಸ್ತಿ ವಿಭಾಗದ ವಿಶ್ವ ರ್ಯಾಂಕಿಂಗ್ನಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.
ಕಳೆದ ವಾರ ಕಜಕೀಸ್ಥಾನದ ನೂರ್-ಸುಲ್ತಾನ್ನಲ್ಲಿ ನಡೆದ ಜೂನಿಯರ್ ವಿಶ್ವ ಚಾಂಪಿಯನ್ನಲ್ಲಿ ಮೊಣಕಾಲು ನೋವಿಗೆ ತುತ್ತಾದ ಕಾರಣದಿಂದಾಗಿ ಅವರು ಇರಾನಿ ಆಟಗಾರ ಹಸನ್ ಯಝ್ದಾನಿ ಅವರ ವಿರುದ್ಧ ಫೈನಲ್ ಪಂದ್ಯದಿಂದ ಹೊರಗುಳಿದು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು.
ಯುನೈಟೆಡ್ ವರ್ಲ್ಡ್ ರಸ್ಲಿಂಗ್ ಬಿಡುಗಡೆ ಮಾಡಿದ ಇತ್ತೀಚಿನ ಶ್ರೇಯಾಂಕದಲ್ಲಿ, ದೀಪಕ್ 82 ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿದ್ದಾರೆ. ವಿಶ್ವ ಚಾಂಪಿಯನ್ ಯಝ್ದಾನಿ ಅವರಿಗಿಂತ ನಾಲ್ಕು ಸ್ಥಾನ ಉನ್ನತ ಮಟ್ಟದಲ್ಲಿದ್ದಾರೆ.
53 ಕೆಜಿ ವಿಭಾಗದಲ್ಲಿ ವಿನೇಶ್ ಫೋಗಟ್ ಅವರು ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ವಿಶ್ವ ಚಾಂಪಿಯನ್ಶಿಪ್ನಲ್ಲಿ ಕಂಚಿನ ಪದಕ ಪಡೆಷ ಭಜರಂಗ್ ಪುನಿಯಾ 65 ಕೆಜಿ ತೂಕ ವಿಭಾಗದಲ್ಲಿ ತಮ್ಮ ಪ್ರಥಮ ಸ್ಥಾನವನ್ನು ಕಳೆದುಕೊಂಡಿದ್ದಾರೆ. ರಷ್ಯಾದ ಗಡ್ಝಿಮುರದ್ ರಶಿದೋವ್ ಅಗ್ರಸ್ಥಾನಕ್ಕೆ ಏರಿದ್ದಾರೆ.
57 ಕೆಜಿ ವಿಭಾಗದಲ್ಲಿ ವಿಶ್ವ ಚಾಂಪಿಯನ್ಶಿಪ್ನಲ್ಲಿ ಕಂಚಿನ ಪದಕ ಗೆದ್ದ ರವಿ ದಾಹಿಯಾ ಅಗ್ರ ಐದು ಸ್ಥಾನಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರು 39 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದ್ದರೆ, ರಾಹುಲ್ ಅವೇರ್ ಅವರು ಎರಡನೇ ಸ್ಥಾನದಲ್ಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.