ನವದೆಹಲಿ: ಪಶ್ಚಿಮಬಂಗಾಳದಲ್ಲಿ ರಾಜಕೀಯ ಹಿಂಸಾಚಾರಕ್ಕೆ ಬಲಿಯಾದ 80 ಬಿಜೆಪಿ ಕಾರ್ಯಕರ್ತರಿಗೆ ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆಪಿ ನಡ್ಡಾ ಅವರು ಮಹಾಲಯ ಅಮವಾಸ್ಯೆಯಾದ ಇಂದು ಸಾಮೂಹಿಕ ‘ತರ್ಪಣ’ವನ್ನು ನೆರವೇರಿಸಿದ್ದಾರೆ.
ಪಶ್ಚಿಮಬಂಗಾಳವು ರಾಜಕೀಯ ಹಿಂಸಾಚಾರಕ್ಕೆ ಹಿಂದಿನಿಂದಲೂ ಕುಖ್ಯಾತಿಯನ್ನು ಪಡೆದುಕೊಂಡಿದೆ. ಇತ್ತೀಚಿನ ಕೆಲವು ವರ್ಷಗಳಲ್ಲಿ ಟಿಎಂಸಿ ಮತ್ತು ಎಡಪಕ್ಷಗಳ ದುರುಳರಿಂದ ಬಿಜೆಪಿಯ ಹಲವಾರು ಮಂದಿ ಹತ್ಯೆಯಾಗಿದ್ದಾರೆ. ಇದುವರೆಗೆ ಅಲ್ಲಿ 80 ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ ಎಂದು ವರದಿ ಮಾಡಲಾಗಿವೆ.
80 ಬಿಜೆಪಿ ಕಾರ್ಯಕರ್ತರಿಗೆ ಸಾಮೂಹಿಕ ತರ್ಪಣವನ್ನು ಮಹಾಲಯವಾದ ಇಂದು ಬಾಗ್ಬಜಾರ್ ಘಾಟ್ನಲ್ಲಿ ಆಯೋಜಿಸಲಾಗಿತ್ತು. ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತರ ಕುಟುಂಬ ಸದಸ್ಯರು ಮತ್ತು ಪಕ್ಷದ ಹಿರಿಯ ಮುಖಂಡರು ಉಪಸ್ಥಿತರಿದ್ದರು ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಯಂತನ್ ಬಸು ಹೇಳಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಟಿಎಂಸಿಗೆ ಪರ್ಯಾಯವಾಗಿ ಕೇಸರಿ ಪಕ್ಷ ಹೊರಹೊಮ್ಮುತ್ತಿದೆ. ರಾಜ್ಯದ 42 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿ 18 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಬಿಜೆಪಿಯ ಬೆಳವಣಿಗೆ ಟಿಎಂಸಿ ಪಕ್ಷದ ಅಸಮಾಧಾನಕ್ಕೆ ಕಾರಣವಾಗಿದೆ. ಈ ಅಸಮಾಧಾನ ರಾಜಕೀಯ ಹಿಂಸಾಚಾರಕ್ಕೆ ಕಾರಣವಾಗುತ್ತಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.