ನವದೆಹಲಿ: ನರೇಂದ್ರ ಮೋದಿ ಸರ್ಕಾರವು ಭ್ರಷ್ಟಾಚಾರ ನಿರ್ಮೂಲನೆ ಮೂಲಕ ಕ್ರಾಂತಿಯನ್ನುಂಟು ಮಾಡಲು ಧೃಢ ಸಂಕಲ್ಪವನ್ನು ತೆಗೆದುಕೊಂಡಿದೆ. ಅಧಿಕಾರಿಗಳಲ್ಲಿ ವೃತ್ತಿಪರತೆಯ ಅಂಶವನ್ನು ತರಲು ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಭ್ರಷ್ಟ ಅಧಿಕಾರಿಗಳ ವಿರುದ್ಧ ಸರ್ಕಾರ ನಡೆಸುತ್ತಿರುವ ಕಾರ್ಯಾಚರಣೆ ಮುಂದುವರಿದಿದ್ದು, ಭ್ರಷ್ಟಾಚಾರ ಹಾಗೂ ಕಾನೂನುಬಾಹಿರ ಕೃತ್ಯಗಳ ಆರೋಪದಡಿ ಆದಾಯ ತೆರಿಗೆ ಇಲಾಖೆಯ 15 ಹಿರಿಯ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ನೀಡಿದೆ.
ಕಳಂಕಿತ ಅಧಿಕಾರಿಗಳನ್ನು ಆಡಳಿತದಿಂದ ಹೊರ ಹಾಕುವ ಕಾರ್ಯವನ್ನು ಮುಂದುವರೆಸಿರುವ ಮೋದಿ ಸರ್ಕಾರವು, ಆದಾಯ ತೆರಿಗೆಯಲ್ಲಿನ ಮತ್ತೆ ಹಲವು ಭ್ರಷ್ಟ ಅಧಿಕಾರಿಗಳನ್ನು ಹೊರ ಹಾಕಿದೆ. ಆದಾಯ ತೆರಿಗೆ ಪ್ರಧಾನ ಆಯುಕ್ತ, ಆದಾಯ ತೆರಿಗೆ ಆಯುಕ್ತ, ಆದಾಯ ತೆರಿಗೆ ಜಂಟಿ ಆಯುಕ್ತ, ಆದಾಯ ತೆರಿಗೆ ಹೆಚ್ಚುವರಿ ಆಯುಕ್ತ ಮತ್ತು ಸಹಾಯಕ ಹುದ್ದೆಗಳನ್ನು ಹೊಂದಿರುವ 15 ಹಿರಿಯ ಆದಾಯ ತೆರಿಗೆ ಅಧಿಕಾರಿಗಳನ್ನು ಕಡ್ಡಾಯವಾಗಿ ನಿವೃತ್ತಿ ಮಾಡಿದೆ.
ಮೂಲಗಳ ಪ್ರಕಾರ, ಮೂಲಭೂತ ನಿಯಮ 15 (ಜೆ) ಅಡಿಯಲ್ಲಿ ಭ್ರಷ್ಟಾಚಾರ ಮತ್ತು ಇತರ ಆರೋಪಗಳನ್ನು ಹೊಂದಿದ್ದ 15 ಹಿರಿಯ ಅಧಿಕಾರಿಗಳನ್ನು ಕೇಂದ್ರ ನೇರ ತೆರಿಗೆ ಮಂಡಳಿಯು ಕಡ್ಡಾಯವಾಗಿ ನಿವೃತ್ತಿ ಮಾಡಿದೆ. ಗಂಭೀರ ಹಿತಾಸಕ್ತಿ ಸಂಘರ್ಷವನ್ನು ಹೊಂದಿದ್ದ ಆದಾಯ ತೆರಿಗೆ ಪ್ರಧಾನ ಆಯುಕ್ತರನ್ನು ಕಡ್ಡಾಯವಾಗಿ ನಿವೃತ್ತಿ ಮಾಡಲಾಗಿದೆ. ಕೆಲವರು ಭ್ರಷ್ಟಚಾರ ಆರೋಪ ಹೊಂದಿದವರನ್ನು ನಿವೃತ್ತಿ ಮಾಡಲಾಗಿದೆ.
ಈ ಹಿಂದೆಯೂ ಆದಾಯ ತೆರಿಗೆಯಲ್ಲಿ ಕಳಂಕಿತ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿಯನ್ನು ಮೋದಿ ಸರ್ಕಾರ ನೀಡಿದೆ. ಇದು ನಾಲ್ಕನೆಯ ಬಾರಿಗೆ ಕಡ್ಡಾಯ ನಿವೃತ್ತಿಯನ್ನು ಅದು ನೀಡುತ್ತಿದೆ. ಈ ಕ್ರಮವನ್ನು ಮೋದಿ ಸರ್ಕಾರ ನಿರಂತರ ಪ್ರಕ್ರಿಯೆಯನ್ನಾಗಿಸಿದೆ. ಇದು ಭ್ರಷ್ಟ ಅಧಿಕಾರಿಗಳಿಗೆ ನಡುಕ ಹುಟ್ಟಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.