ಶ್ರೀನಗರ: ಜಮ್ಮು-ಕಾಶ್ಮೀರದ ರಾಂಬನ್ ಜಿಲ್ಲೆಯ ಬಟೊಟೆ ನಗರದಲ್ಲಿ ಶನಿವಾರ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ರಾಂಬನ್ SSP ಅನಿತಾ ಶರ್ಮಾ ಅವರು ಉಗ್ರರಿಗೆ ಶರಣಾಗುವಂತೆ ಎಚ್ಚರಿಕೆಯನ್ನು ನೀಡಿದ್ದಾರೆ. ಈ ದೃಶ್ಯ ವಿಡಿಯೋದಲ್ಲಿದೆ ರೆಕಾರ್ಡ್ ಆಗಿದೆ.
#WATCH Anita Sharma, SSP Ramban, asking terrorists to surrender during the encounter in Batote town of Ramban district of Jammu Zone, earlier today. #JammuAndKashmir pic.twitter.com/jcxGm3CkNy
— ANI (@ANI) September 28, 2019
ಬಟೊಟೆಯಲ್ಲಿ ಶನಿವಾರ ಉಗ್ರರು ಓರ್ವ ನಾಗರಿಕನನ್ನು ಮನೆಯೊಂದರ ಒಳಗೆ ಒತ್ತೆಯಾಗಿ ಇಟ್ಟುಕೊಂಡಿದ್ದರು. ಈ ವೇಳೆ ಕಾರ್ಯಾಚರಣೆ ನಡೆಸಿದ ಭದ್ರತಾಪಡೆಗಳು ಮೂವರು ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದೆ.
ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಸಿಆರ್ಪಿಎಫ್ ಜಂಟಿಯಾಗಿ ನಡೆಸಿದ ಈ ಕಾರ್ಯಾಚರಣೆಯಲ್ಲಿ ಉಗ್ರರು ಒತ್ತೆಯಾಗಿ ಇಟ್ಟುಕೊಂಡಿದ್ದ ವ್ಯಕ್ತಿಯನ್ನು ಸುರಕ್ಷಿತವಾಗಿ ರಕ್ಷಣೆ ಮಾಡಲಾಗಿದೆ.
ಜಮ್ಮು ಇನ್ಸ್ಪೆಕ್ಟರ್ ಜನರಲ್ ಆಫ್ ಪೋಲೀಸ್ ಮುಕೇಶ್ ಈ ಬಗ್ಗೆ ಮಾಹಿತಿಯನ್ನು ನೀಡಿದ್ದು,”ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಒತ್ತೆಯಾಳನ್ನು ಸುರಕ್ಷಿತವಾಗಿ ರಕ್ಷಣೆ ಮಾಡಲಾಗಿದೆ. ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಗುಂಡು ತಗುಲಿದೆ, ಓರ್ವ ಯೋಧ ಮೃತಪಟ್ಟಿದ್ದಾನೆ. ಪ್ರಸ್ತುತ ಕಾರ್ಯಾಚರಣೆ ಸ್ಥಗಿತ ಗೊಂಡಿದೆ”ಎಂದಿದ್ದಾರೆ.
ಬಟೊಟೆಯಲ್ಲಿನ ಮನೆಯೊಂದಕ್ಕೆ ಶನಿವಾರ ಬೆಳಿಗ್ಗೆ ನುಗ್ಗಿದ ಉಗ್ರರು, ಬಳಿಕ ಭದ್ರತಾಪಡೆಗಳು ಅಲ್ಲಿಗೆ ಆಗಮಿಸುತ್ತಿದ್ದಂತೆ ಓಡಿಹೋಗಲು ಪ್ರಯತ್ನಿಸಿದ್ದಾರೆ. ಈ ವೇಳೆ ಎನ್ಕೌಂಟರ್ ಅನ್ನು ಆರಂಭಿಸಲಾಗಿದೆ. ಈ ವೇಳೆ ಉಗ್ರರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗಾಡಿಯನ್ನು ನಿಲ್ಲಿಸಿ ಅದರ ಮೂಲಕ ಪರಾರಿಯಾಗಲು ಪ್ರಯತ್ನಿಸಿದ್ದಾರೆ. ಆದರೆ ವಾಹನದ ಚಾಲಕ ಗಾಡಿಯನ್ನು ನಿಲ್ಲಿಸದೆ ತಕ್ಷಣವೇ ಸೇನೆಗೆ ಮಾಹಿತಿಯನ್ನು ನೀಡಿದ್ದಾರೆ. ತಕ್ಷಣವೇ ಸೇನೆ ಉಗ್ರರನ್ನು ಬೆನ್ನಟ್ಟಿಕೊಂಡು ಹೋಗಿದೆ. ಈ ವೇಳೆ ಉಗ್ರರು ನಾಗರಿಕನನ್ನು ಒತ್ತೆಯಾಗಿಟ್ಟುಕೊಂಡು ಮನೆಯೊಂದರಲ್ಲಿ ಆಶ್ರಯ ಪಡೆಯಲು ಪ್ರಯತ್ನಿಸಿದ್ದಾರೆ. ಈ ವೇಳೆ ಸೇನೆಯು ಉಗ್ರರನ್ನು ಕೊಂದುಹಾಕಿ ನಾಗರಿಕನನ್ನು ರಕ್ಷಣೆ ಮಾಡಿದೆ.
ಕಾರ್ಯಾಚರಣೆಯಲ್ಲಿ ನಾಯಕ್ ರಾಜೇಂದ್ರ ಸಿಂಗ್ ಅವರು ಹುತಾತ್ಮರಾಗಿದ್ದು ಸೇನೆ ಸಂತಾಪ ಸೂಚಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.