ನವದೆಹಲಿ: ಮಾನವನ ಆರೋಗ್ಯಕ್ಕೆ ಹೃದಯವೇ ಕೇಂದ್ರ. ಇದರ ಆರೋಗ್ಯದ ಬಗ್ಗೆ ಕಾಳಜಿ ಮಾಡಬೇಕಾಗಿರುವುದು ಪ್ರತಿಯೊಬ್ಬನಿಗೂ ಅನಿವಾರ್ಯ. ಹೃದಯದ ಆರೋಗ್ಯದ ಬಗ್ಗೆ ಅರಿವನ್ನು ಮೂಡಿಸುವ ಸಲುವಾಗಿ ಎಂದು ವಿಶ್ವ ಹೃದಯ ದಿನವನ್ನು ಆಚರಣೆ ಮಾಡಲಾಗುತ್ತಿದೆ.
1990ರಿಂದ ಪ್ರತಿ ವರ್ಷದ ಸೆಪ್ಟೆಂಬರ್ ಕೊನೆಯ ಭಾನುವಾರವನ್ನು ವಿಶ್ವ ಹೃದಯ ದಿನವನ್ನಾಗಿ ವಿಶ್ವ ಹೃದಯ ಸಂಸ್ಥೆಯು ಆಯೋಜಿಸುತ್ತಾ ಬಂದಿದೆ. ಆದರೆ 2011 ರಿಂದ ವಿಶ್ವ ಹೃದಯ ದಿನವನ್ನು ಸೆಪ್ಟೆಂಬರ್ ಕೊನೆಯ ಭಾನುವಾರದ ಬದಲಾಗಿ 29 ಸೆಪ್ಟೆಂಬರ್ನಂದು ಆಚರಿಸಲಾಗುತ್ತಿದೆ.
ವಿಶ್ವ ಹೃದಯ ಸಂಸ್ಥೆಯು ಹೃದಯಕ್ಕೆ ಅಪಾಯಕಾರಿ ಅಂಶಗಳಾದ ತಂಬಾಕು, ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ದೈಹಿಕ ಚಟುವಟಿಕೆ ಇಲ್ಲದಿರುವಿಕೆಗಳನ್ನು ನಿಯಂತ್ರಿಸುವುದರಿಂದ ಹೃದಯ ರೋಗ ಮತ್ತು ಹೃದಯಾಘಾತಗಳು ಸಂಭವಿಸುತ್ತಿದೆ ಎಂಬ ಅರಿವನ್ನು ಮೂಡಿಸುವ ಪ್ರಯತ್ನವನ್ನು ಈ ದಿನದ ಮೂಲಕ ಮಾಡುತ್ತಿದೆ.
ಉತ್ತಮ ಜೀವನ ಶೈಲಿಯ ಮೂಲಕ ಹೃದಯಾಘಾತಗಳನ್ನು ಕನಿಷ್ಠ ಶೇ.80 ರಷ್ಟು ತಪ್ಪಿಸಬಹುದಾಗಿದೆ ಎಂದು ವಿಶ್ವ ಹೃದಯ ಸಂಸ್ಥೆ ಹೇಳುತ್ತದೆ.
ಹೃದಯದ ಬಗ್ಗೆ ಜಾಗೃತಿಯನ್ನು ಮೂಡಿಸುವ ಸಲುವಾಗಿ ಸಾರ್ವಜನಿಕ ಜಾಗೃತಿ ಕಾರ್ಯಕ್ರಮ, ಪ್ರದರ್ಶನ, ನಡಿಗೆ ಮತ್ತು ಓಟ, ಸಂಗೀತ, ಕ್ರೀಡಾಕೂಟಗಳಂಥ ಚಟುವಟಿಕೆಗಳನ್ನು ವಿಶ್ವದಾದ್ಯಂತ ಏರ್ಪಡಿಸಲಾಗುತ್ತಿದೆ.
ವಿಶ್ವ ಹೃದಯ ಸಂಸ್ಥೆಯು ಹೃದಯ ಕಾಯಿಲೆಗಳ ತಡೆಗಟ್ಟುವಿಕೆಗಾಗಿ ಮೀಸಲಾಗಿರುವ ಜಾಗತಿಕ ಸಂಸ್ಥೆಯಾಗಿದ್ದು ಮತ್ತು ಏಷ್ಯಾ ಫೆಸಿಫಿಕ್, ಯುರೋಪ್, ಪೂರ್ವ ಮೆಡಿಟರೇನಿಯನ್, ಅಮೆರಿಕಾ ಮತ್ತು ಆಫ್ರಿಕಾದ ಪ್ರದೇಶಗಳಲ್ಲಿರುವ ಸುಮಾರು 100 ದೇಶಗಳ ಹೃದಯ ಸಂಸ್ಥೆಗಳನ್ನು ನಿಯಂತ್ರಿಸುತ್ತಿದೆ. ಸ್ವಿಜರ್ಲ್ಯಾಂಡ್ನ ಜಿನೀವಾ ಮೂಲದ ಸರಕಾರೇತರ ಸಂಘಟನೆ ಇದಾಗಿದೆ.
ಭಾರತದಲ್ಲೂ ಹೃದಯ ಸಂಬಂಧಿ ಕಾಯಿಲೆಗಳ ಬಗ್ಗೆ ಜನರಲ್ಲಿ ಹೆಚ್ಚಿನ ಅರಿವನ್ನು ಮೂಡಿಸುವ ಸಲುವಾಗಿ ಹಲವಾರು ಕಾರ್ಯಕ್ರಮಗಳನ್ನು ಆಯೋಜನೆಗೊಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.