ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಜುಲೈ 17ರಂದು ಶ್ರೀನಗರಕ್ಕೆ ತೆರಳಿ ಅಲ್ಲಿ ಇಫ್ತಾರ್ ಕೂಟವನ್ನು ಆಯೋಜನೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಾಜಿ ಮಂತ್ರಿ ಗಿರ್ಧರಿ ಲಾಲ್ ದೋಗ್ರಾ ಅವರ 100ನೇ ಜನ್ಮದಿನವನ್ನು ಆಚರಿಸುವ ಸಲುವಾಗಿ ಮೋದಿ ಜಮ್ಮು ಕಾಶ್ಮೀರಕ್ಕೆ ತರಳುತ್ತಿದ್ದಾರೆ. ಶ್ರೀನಗರಕ್ಕೆ ತೆರಳುವ ಬಗೆಗಿನ ಯೋಜನೆ ರೂಪುಗೊಳ್ಳುತ್ತಿದ್ದು, ವಿದೇಶಿ ಪ್ರವಾಸದಿಂದ ವಾಪಾಸ್ಸಾದ ಬಳಿಕ ಈ ಬಗ್ಗೆ ಅಧಿಕೃತ ಪ್ರಕಟನೆ ಹೊರಬೀಳಲಿದೆ.
ಜುಲೈ17 ರಂಜಾನ್ ಮಾಸದ ಕೊನೆಯ ಶುಕ್ರವಾರ, ಈದ್ ಉಲ್ ಫಿತರ್ ಹಬ್ಬ ಆಚರಿಸಲಾಗುತ್ತದೆ.
2014ರ ಮೇನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಪ್ರಧಾನಿ ಮೋದಿ ಹಲವಾರು ಬಾರಿ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ. ದೀಪಾವಳಿಯ ಸಂದರ್ಭದಲ್ಲೂ ಅವರು ಕಣಿವೆ ರಾಜ್ಯದಲ್ಲಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.