ಶ್ರೀನಗರ: ಹೊಸದಾಗಿ ರೂಪುಗೊಂಡ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಬಾರಿಗೆ ಬ್ಲಾಕ್ ಡೆವಲಪ್ಮೆಂಟ್ ಕೌನ್ಸಿಲ್ (ಬಿಡಿಸಿ) ಅಥವಾ ಮೂರು ಹಂತದ ಪಂಚಾಯತ್ ಚುನಾವಣೆ ಅಕ್ಟೋಬರ್ 24 ರಂದು ನಡೆಯಲಿದೆ ಎಂದು ಶ್ರೀನಗರದ ಮುಖ್ಯ ಚುನಾವಣಾಧಿಕಾರಿ ಶೈಲೇಂದ್ರ ಕುಮಾರ್ ಮಾಹಿತಿಯನ್ನು ನೀಡಿದ್ದಾರೆ.
ಮತಗಳ ಎಣಿಕೆ ಕಾರ್ಯ ಕೂಡ ಅದೇ ದಿನ ನಡೆಯಲಿದೆ.
ಕೇಂದ್ರಾಡಳಿತ ಪ್ರದೇಶದ ಒಟ್ಟು 316 ಬ್ಲಾಕ್ಗಳ ಪೈಕಿ 310 ಬ್ಲಾಕ್ಗಳಲ್ಲಿ ತೆಹಶಿಲ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆ ನಡೆಯಲಿದೆ ಎಂದು ಶೈಲೇಂದ್ರ ಕುಮಾರ್ ತಿಳಿಸಿದ್ದಾರೆ. ಸರ್ಪಂಚ್ ಸ್ಥಾನಕ್ಕೆ ಅಭ್ಯರ್ಥಿಗಳು ಇನ್ನೂ ನಾಮನಿರ್ದೇಶನಗೊಂಡಿಲ್ಲವಾದ ಕಾರಣ ಪುಲ್ವಾಮಾ ಮತ್ತು ಶ್ರೀನಗರದ ಬ್ಲಾಕ್ಗಳಿಗೆ ಚುನಾವಣೆ ನಡೆಯುತ್ತಿಲ್ಲ. ಇದಲ್ಲದೆ, ಉಮೇದುವಾರಿಕೆಯೊಂದಿಗೆ ಯಾವುದೇ ಮಹಿಳೆಯರು ಮುಂದೆ ಬಂದಿಲ್ಲದ ಕಾರಣ ಮಹಿಳಾ ಅಭ್ಯರ್ಥಿಗಳಿಗಾಗಿ ಕಾಯ್ದಿರಿಸಲಾದ ನಾಲ್ಕು ಬ್ಲಾಕ್ಗಳಿಗೂ ಚುನಾವಣೆಯನ್ನು ನಡೆಸಲಾಗುತ್ತಿಲ್ಲ.
ಹೊಸದಾಗಿ ರೂಪುಗೊಂಡ ಕೇಂದ್ರಾಡಳಿತ ಪ್ರದೇಶದಲ್ಲಿ ಅಭಿವೃದ್ಧಿಯನ್ನು ತರುವ ಮತ್ತು ಹೊಸ ಕಾಶ್ಮೀರವನ್ನು ನಿರ್ಮಿಸುವ ಪ್ರಧಾನಿ ನರೇಂದ್ರ ಮೋದಿಯವರ ದೃಷ್ಟಿಕೋನಕ್ಕೆ ಅನುಗುಣವಾಗಿ, ಆಯ್ದ 3300 ಪಂಚರು ಮತ್ತು 115 ಆಯ್ದ ಸರ್ಪಂಚ್ಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ತಳಮಟ್ಟದಲ್ಲಿ ಉನ್ನತಿ ಮತ್ತು ಪ್ರಗತಿಯನ್ನು ತರಲು ಬ್ಲಾಕ್ ಡೆವಲಪ್ಮೆಂಟ್ ಕೌನ್ಸಿಲ್ ಅನ್ನು ರಚಿಸಲಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಕಾರ್ಯದರ್ಶಿ ಶೀತಲ್ ನಂದಾ ಹೇಳಿದ್ದಾರೆ.
ಚುನಾವಣಾ ಪ್ರಕ್ರಿಯೆಯನ್ನು ಭಾನುವಾರದಿಂದ ಪ್ರಾರಂಭಿಸಲಾಗಿದ್ದು, ಕೆಲವೇ ದಿನಗಳಲ್ಲಿ ಈ ನಿಟ್ಟಿನಲ್ಲಿ ಅಧಿಕೃತ ಅಧಿಸೂಚನೆ ಹೊರಡಿಸಲಾಗುವುದು ಎಂದು ನಂದಾ ಹೇಳಿದ್ದಾರೆ.
ಪರಿಶಿಷ್ಟ ಜಾತಿ (ಎಸ್ಸಿ), ಪರಿಶಿಷ್ಟ ಪಂಗಡ (ಎಸ್ಟಿ) ಮತ್ತು ಪಂಚಾಯತ್ ಚುನಾವಣೆಗೆ ಮಹಿಳಾ ಅಭ್ಯರ್ಥಿಗಳಿಗೆ ಬ್ಲಾಕ್ಗಳನ್ನು ಕಾಯ್ದಿರಿಸಲಾಗಿದೆ.
ಬ್ಲಾಕ್ ಡೆವಲಪ್ಮೆಂಟ್ ಕೌನ್ಸಿಲ್ ಚುನಾವಣೆಯಲ್ಲಿ ಒಟ್ಟು 26,629 ಮತದಾರರು ಮತ ಚಲಾಯಿಸಲಿದ್ದು, ಇದಕ್ಕಾಗಿ ಎಲ್ಲಾ 310 ಬ್ಲಾಕ್ಗಳಲ್ಲಿ ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಪ್ರತಿ ಅಭ್ಯರ್ಥಿಯು ಚುನಾವಣಾ ಪ್ರಚಾರಕ್ಕಾಗಿ 2 ಲಕ್ಷ ರೂ. ಖರ್ಚು ಮಾಡಬಹುದು ಎಂದು ಮುಖ್ಯ ಚುನಾವಣಾ ಅಧಿಕಾರಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.