ನವದೆಹಲಿ: ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಾಗಿ ಬಿಜೆಪಿಯು 125 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ನಾಗ್ಪುರ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. 2014ರಲ್ಲೂ ಅವರು ಇದೇ ಕ್ಷೇತ್ರದಿಂದ ಸ್ಪರ್ಥಿಸಿದ್ದರು.
ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಅವರನ್ನು ಕೋತ್ರೂಡ್ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದ್ದು, ಪಂಕಜಾ ಮುಂಡೆ ಅವರು ಪಾರ್ಲಿಯಿಂದ ಸ್ಪರ್ಧಿಸಲಿದ್ದಾರೆ. ಛತ್ರಪತಿ ಶಿವಾಜೀ ಮಹಾರಾಜರ ವಂಶಸ್ಥರಾದ ಶಿವೇಂದ್ರ ಸಿಂಗ್ ಅವರು ಸತಾರಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಲೋಕಮಾನ್ಯ ತಿಲಕರ ಅಳಿಯ ಮುಕ್ತಾ ತಿಲಕ್ಗೆ ಕಸ್ಬಾ ಪೆಟ್ನಿಂದ ಟಿಕೆಟ್ ನೀಡಲಾಗಿದೆ. ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ ರಾಧಾಕೃಷ್ಣ ವಿಖ್ ಪಾಟೀಲ್ ಅವರು ಶಿರಡಿಯಿಂದ ಸ್ಪರ್ಧಿಸಲಿದ್ದಾರೆ. ಜಮ್ನರ್ನಿಂದ ಸಚಿವ ಗಿರೀಶ್ ಮಹಾಜನ್ ಸ್ಪರ್ಧಿಸಲಿದ್ದಾರೆ.
ಲೋಕಸಭಾ ಉಪಚುನಾವಣೆಯಲ್ಲಿ ಸತಾರದಿಂದ ಸ್ಪರ್ಧಿಸಲು ಉದಯನ್ ರಾಜ್ ಭೋಂಸ್ಲೆ ಆಯ್ಕೆಯಾಗಿದ್ದಾರೆ. ವಿಶೇಷವೆಂದರೆ, ಬಿಜೆಪಿ ನವೀ ಮುಂಬಯಿಯ ಎರಡೂ ಅಸೆಂಬ್ಲಿ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಈ ಕ್ಷೇತ್ರಗಳ ಮೇಲೆ ಶಿವಸೇನೆ ಕಣ್ಣಿಟ್ಟಿತ್ತು.
ರಾಜ್ಯದಲ್ಲಿನ ಆಡಳಿತಾರೂಢ ಬಿಜೆಪಿ-ಶಿವಸೇನಾ ಮೈತ್ರಿ ಅಕ್ಟೋಬರ್ 21 ರ ವಿಧಾನಸಭಾ ಚುನಾವಣೆಯಲ್ಲಿ ಜಂಟಿಯಾಗಿ ಸ್ಪರ್ಧಿಸುವುದಾಗಿ ಬಿಜೆಪಿ ಮತ್ತು ಶಿವಸೇನೆ ಸೋಮವಾರ ಜಂಟಿ ಹೇಳಿಕೆ ನೀಡಿದೆ. ಮೈತ್ರಿಕೂಟದಲ್ಲಿ ಬಿಜೆಪಿ, ಶಿವಸೇನೆ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ-ಎ, ರಾಷ್ಟ್ರೀಯ ಸಮಾಜ ಪಕ್ಷ, ಶಿವ ಸಂಗ್ರಾಮ್ ಪಕ್ಷ ಮತ್ತು ರಾಯತ್ ಕ್ರಾಂತಿ ಸಂಘಟನೆಗಳು ಸೇರಿವೆ.
ಅಕ್ಟೋಬರ್ 21 ರಂದು ಮಹಾರಾಷ್ಟ್ರ ಮತದಾನ ನಡೆಯಲಿದ್ದು, ಅಕ್ಟೋಬರ್ 24 ರಂದು ಮತ ಎಣಿಕೆ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.