ಲಕ್ನೋ: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗರನ್ನು ಹೊರ ಹಾಕುವ ನಿಟ್ಟಿನಲ್ಲಿ ಉತ್ತರಪ್ರದೇಶ ಕಾರ್ಯಪ್ರವೃತ್ತವಾಗಿದೆ. ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಪತ್ತೆ ಮಾಡುವಂತೆ ಉತ್ತರಪ್ರದೇಶದ ಪೊಲೀಸ್ ಮಹಾನಿರ್ದೇಶಕ ಓ.ಪಿ ಸಿಂಗ್ ಅವರು ಎಲ್ಲಾ ಜಿಲ್ಲೆಯ ಪೊಲೀಸ್ ಮುಖ್ಯಸ್ಥರಿಗೆ ಆದೇಶವನ್ನು ನೀಡಿದ್ದಾರೆ.
ಈ ಕ್ರಮವು ಆಂತರಿಕ ಭದ್ರತೆಗೆ ಅತ್ಯಂತ ನಿರ್ಣಾಯಕವಾಗಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥರಿಗೆ ಬರೆದಿರುವ ಪತ್ರದಲ್ಲಿ ಡಿಜಿಪಿ ಉಲ್ಲೇಖ ಮಾಡಿದ್ದಾರೆ.
ಈ ಪ್ರಕ್ರಿಯೆಯಲ್ಲಿ ಗುರುತಿಸಲಾಗುವ ಅಕ್ರಮ ವಲಸಿಗರನ್ನು ಗಡಿಪಾರು ಮಾಡುವ ಕಾರ್ಯವನ್ನು ಸೂಕ್ತ ಸಮಯದಲ್ಲಿ ಮತ್ತು ಹಿರಿಯ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ನಡೆಸಲಾಗುವುದು ಎಂದು ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ತಮ್ಮ ತಮ್ಮ ಜಿಲ್ಲೆಯ ಹೊರವಲಯದಲ್ಲಿರುವ ಸಾರಿಗೆ ಕೇಂದ್ರಗಳಲ್ಲಿ ಮತ್ತು ಕೊಳೆಗೇರಿ ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸುವಂತೆ ಮತ್ತು ಅನುಮಾನಾಸ್ಪದವಾಗಿ ಯಾರಾದರೂ ತಿರುಗಾಡುತ್ತಿದ್ದರೆ ಅಂತಹವರ ದಾಖಲೆಗಳನ್ನು ಪರಿಶೀಲಿಸುವಂತೆ ಉತ್ತರ ಪ್ರದೇಶ ಪೊಲೀಸರಿಗೆ ಆದೇಶಿಸಲಾಗಿದೆ.
ವಿದೇಶಿಯರು ಮತ್ತು ಅಕ್ರಮ ನಿವಾಸಿಗಳಿಗೆ ನಕಲಿ ದಾಖಲೆಗಳನ್ನು ತಯಾರಿಸಲು ಸಹಾಯ ಮಾಡಿದ ಸರ್ಕಾರಿ ನೌಕರರನ್ನು ಪತ್ತೆಹಚ್ಚುವಂತೆಯೂ ಪೊಲೀಸರಿಗೆ ಸೂಚನೆಯನ್ನು ನೀಡಲಾಗಿದೆ.
ಬಾಂಗ್ಲಾದೇಶಿಗಳು ಅಥವಾ ಇತರ ವಿದೇಶಿಯರು ಎಂದು ಗುರುತಿಸಲ್ಪಟ್ಟ ಜನರ ಬೆರಳಚ್ಚುಗಳನ್ನು ತೆಗೆದುಕೊಳ್ಳಲೂ ಎಂದೂ ಸೂಚಿಸಲಾಗಿದೆ. ಅಲ್ಲದೇ, ಎಲ್ಲಾ ಕಾರ್ಮಿಕರ ದಾಖಲೆಗಳನ್ನು, ಗುರುತಿನ ಪುರಾವೆಗಳನ್ನು ಇಟ್ಟುಕೊಳ್ಳುವಂತೆ ನಿರ್ಮಾಣ ಕಂಪನಿಗಳಿಗೆ ಸೂಚಿಸಲಾಗಿದೆ.
ವಲಸಿಗರು ಮಾದಕವಸ್ತು ಮತ್ತು ಅಕ್ರಮ ಶಸ್ತ್ರಾಸ್ತ್ರ ವ್ಯಾಪಾರದಲ್ಲಿ ತೊಡಗಿಸಿಕೊಂಡಿದ್ದಾರೆ ಮತ್ತು ಕೊರಿಯರ್ಗಳಾಗಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಗುರುತಿಸುವುದರಿಂದ ಮತ್ತು ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದರಿಂದ ಕಾನೂನು ಸುವ್ಯವಸ್ಥೆಯ ಪರಿಸ್ಥಿತಿಯಲ್ಲಿ ಸುಧಾರಣೆಯಾಗಲಿದೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.