ಲಕ್ನೋ: ಮಹಾತ್ಮ ಗಾಂಧಿಯವರ 150ನೇ ಜನ್ಮ ದಿನಾಚರಣೆಯ ಪ್ರಯುಕ್ತ ಇಂದು ಉತ್ತರ ಪ್ರದೇಶವು ವಿಶೇಷ ವಿಧಾನಸಭೆ ಅಧಿವೇಶನವನ್ನು ನಡೆಸುತ್ತಿದ್ದು, ಇಲ್ಲಿ ರಾಜ್ಯ ಅಭಿವೃದ್ಧಿ ಗುರಿಗಳ ಕುರಿತು 36 ಗಂಟೆಗಳ ಸುದೀರ್ಘ ಚರ್ಚೆ ನಡೆಯಲಿದೆ.
ಈ ಬಗ್ಗೆ ಮಾಹಿತಿಯನ್ನು ನೀಡಿರುವ ಆ ರಾಜ್ಯದ ಉಪಮುಖ್ಯಮಂತ್ರಿ ದಿನೇಶ್ ಶರ್ಮಾ ಅವರು, ಅಕ್ಟೋಬರ್ 2 ರಂದು ಬೆಳಿಗ್ಗೆ 11 ಗಂಟೆಗೆ ಅಧಿವೇಶನದಲ್ಲಿ ಚರ್ಚೆ ಆರಂಭವಾಗಲಿದೆ ಎಂದು ಹೇಳಿದ್ದಾರೆ.
“ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ 16 ಅಂಶಗಳನ್ನು ಚರ್ಚಿಸಲು ವಿಶೇಷ ವಿಧಾನಸಭೆ ಅಧಿವೇಶನವನ್ನು ಕರೆಯಲಾಗಿದೆ. ಗಾಂಧಿ ಜಯಂತಿ ಸಂದರ್ಭದಲ್ಲಿ ಚರ್ಚೆ ನಡೆಯಲಿದೆ. ಅಕ್ಟೋಬರ್ 2 ರಂದು ಬೆಳಿಗ್ಗೆ 11 ಗಂಟೆಗೆ ಚರ್ಚೆಯು ಆರಂಭವಾಗಿದ್ದು, 36 ಗಂಟೆಗಳ ಕಾಲ ಇದು ಮುಂದುವರೆಯಲಿದೆ ” ಎಂದಿದ್ದಾರೆ.
ಮುಂಬರುವ ವಿಧಾನಸಭಾ ಉಪಚುನಾವಣೆಯ ಬಗ್ಗೆ ಮಾತನಾಡಿದ ಅವರು, “ಈ ಬಾರಿ ಚುನಾವಣೆಯು ಸಕಾರಾತ್ಮಕ ಯೋಜನೆಗಳೊಂದಿಗೆ ಪ್ರಾರಂಭವಾಗಲಿದೆ. ಬಿಜೆಪಿ ದೇಶಕ್ಕಾಗಿ ಕೆಲಸ ಮಾಡಿರುವುದರಿಂದ ಖಂಡಿತವಾಗಿಯೂ ಗೆಲುವು ಪಡೆಯುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಡುವಿನ ಸಮನ್ವಯವು ರಾಜ್ಯಕ್ಕೆ ಸಕಾರಾತ್ಮಕವಾಗಿ ಕೆಲಸ ಮಾಡುತ್ತಿದೆ” ಎಂದಿದ್ದಾರೆ.
ಉತ್ತರಪ್ರದೇಶದ 11 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ಇದೇ ತಿಂಗಳು ನಡೆಯುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.