ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಮಿಜೋರಾಂಗೆ ಭೇಟಿ ನೀಡಲಿದ್ದಾರೆ. ಅಧಿಕಾರ ವಹಿಸಿಕೊಂಡ ನಂತರ ಈಶಾನ್ಯ ರಾಜ್ಯಕ್ಕೆ ಶಾ ಅವರು ನೀಡುತ್ತಿರುವ ಮೊದಲ ಭೇಟಿ ಇದಾಗಿದೆ. ರಾಜ್ಯ ರಾಜಧಾನಿ ಐಝ್ವಾಲ್ನಲ್ಲಿ ಅವರು ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪೌರತ್ವ (ತಿದ್ದುಪಡಿ) ಮಸೂದೆ (ಸಿಎಬಿ) ಸಂಬಂಧಿತ ವಿಷಯಗಳ ಬಗ್ಗೆ ರಾಜ್ಯ ಸರ್ಕಾರದೊಂದಿಗೆ ಅವರು ಚರ್ಚಿಸುವ ನಿರೀಕ್ಷೆಯಿದೆ.
ಐಝ್ವಾಲ್ನಲ್ಲಿನ ಈಶಾನ್ಯ ಕೈಮಗ್ಗ ಮತ್ತು ಕರಕುಶಲ ಪ್ರದರ್ಶನವನ್ನು ಶಾ ಉದ್ಘಾಟಿಸಲಿದ್ದಾರೆ.
ಕಳೆದ ಜನವರಿ 8 ರಂದು ಲೋಕಸಭೆಯಲ್ಲಿ ಅಂಗೀಕರಿಸಲ್ಪಟ್ಟ ಪೌರತ್ವ (ತಿದ್ದುಪಡಿ) ಮಸೂದೆ, 2014ರ ಡಿಸೆಂಬರ್ 31 ರ ಮೊದಲು ಭಾರತಕ್ಕೆ ಬಂದ ಬಾಂಗ್ಲಾದೇಶ, ಪಾಕಿಸ್ಥಾನ ಮತ್ತು ಅಫ್ಘಾನಿಸ್ತಾನದಿಂದ ಹಿಂದೂಗಳು, ಸಿಖ್ಖರು, ಬೌದ್ಧರು, ಪಾರ್ಸಿಗಳು, ಕ್ರಿಶ್ಚಿಯನ್ನರು ಮತ್ತು ಜೈನರಿಗೆ ಪೌರತ್ವ ನೀಡುವ ಗುರಿಯನ್ನು ಹೊಂದಿದೆ. ಆದರೆ ಲೋಕಸಭೆ ಅಂಗೀಕರಿಸಿದ ಮಸೂದೆಯು ರಾಜ್ಯಸಭೆಯಲ್ಲಿ ಮಂಡನೆಗೊಳ್ಳದ ಕಾರಣ 2019 ರ ಫೆಬ್ರವರಿಯಲ್ಲಿ ಇದು ರದ್ದಾಗಿದೆ. ಈ ವಿಷಯದ ಬಗ್ಗೆ ಇಂದು ಶಾ ಚರ್ಚೆ ನಡೆಸಲಿದ್ದಾರೆ.
ಈ ನಡುವೆ, ಮಿಜೋರಾಂನ ಜವಾಹರ್ ನವೋದಯ ವಿದ್ಯಾಲಯದಲ್ಲಿ (ಜೆಎನ್ವಿ) ಮಿಜೋ ಜನರು ಚಕ್ಮಾ ವಿದ್ಯಾರ್ಥಿಗಳನ್ನು ಹಿಂಸಿಸಿದ ಆರೋಪದ ಬಗ್ಗೆ ಚಕ್ಮಾ ವಿದ್ಯಾರ್ಥಿಗಳ ಸಂಘಟನೆಯೂ ಶಾ ಅವರ ಹಸ್ತಕ್ಷೇಪವನ್ನು ಕೋರಿದೆ ಎಂದು ವರದಿಗಳು ಹೇಳಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.