ನವದೆಹಲಿ: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ನವದೆಹಲಿಯಲ್ಲಿ ದ್ವಿಪಕ್ಷೀಯ ಮಾತುಕತೆಯನ್ನು ನಡೆಸಿದ್ದಾರೆ. ಉಭಯ ದೇಶಗಳ ನಡುವಣ ಸಂಬಂಧಗಳನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಉಭಯ ನಾಯಕರು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
10 ದಿನಗಳೊಳಗೆ ಪ್ರಧಾನಿ ಮೋದಿ ಮತ್ತು ಶೇಖ್ ಹಸೀನಾ ಅವರ ನಡುವೆ ನಡೆಯುತ್ತಿರುವ ಎರಡನೇಯ ಸಭೆ ಇದಾಗಿದೆ. ಸೆಪ್ಟೆಂಬರ್ 27 ರಂದು ನ್ಯೂಯಾರ್ಕ್ನಲ್ಲಿ ನಡೆದ ಯುಎನ್ ಜನರಲ್ ಅಸೆಂಬ್ಲಿಯ ಸಂದರ್ಭದಲ್ಲಿ ಉಭಯ ನಾಯಕರು ಭೇಟಿಯಾಗಿದ್ದರು.
“ದ್ವಿಪಕ್ಷೀಯ ಸಂಬಂಧಕ್ಕೆ ಒತ್ತು ನೀಡುವ ಪ್ರಧಾನಿ ನರೇಂದ್ರ ಮೋದಿಯವರು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಭಾರತ ಮತ್ತು ಬಾಂಗ್ಲಾ ನಡುವಣ ಸಂಬಂಧವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಉಭಯ ನಾಯಕರು 10 ದಿನಗಳಲ್ಲಿ ನಡೆಸುತ್ತಿರುವ ಎರಡನೇಯ ಸಭೆ ಇದಾಗಿದೆ” ಎಂದು ವಿದೇಶಾಂಗ ಸಚಿವ ರವೀಶ್ ಕುಮಾರ್ ಟ್ವಿಟ್ ಮಾಡಿದ್ದಾರೆ.
ಇದಕ್ಕೂ ಮೊದಲು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಶನಿವಾರ ಬೆಳಿಗ್ಗೆ ಹಸೀನಾ ಅವರನ್ನು ಭೇಟಿ ಮಾಡಿದರು.
ಹೈದರಾಬಾದ್ ಹೌಸ್ನಲ್ಲಿ ನಡೆಯುವ ಮೋದಿ ಮತ್ತು ಹಸೀನಾ ನಡುವಣ ಮಾತುಕತೆಯ ನಂತರ ಸಂಪರ್ಕ, ಸಾಮರ್ಥ್ಯ ವೃದ್ಧಿ ಮತ್ತು ಸಂಸ್ಕೃತಿ ಕ್ಷೇತ್ರಗಳಿಗೆ ಸಂಬಂಧಪಟ್ಟ 7 ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ. ವ್ಯಾಪಾರ ಮತ್ತು ಸಂಪರ್ಕ, ಅಭಿವೃದ್ಧಿ ಸಹಕಾರ ಮತ್ತು ಜನರಿದ ಜನರಿಗಾಗಿನ ಸಂಪರ್ಕ, ಸಂಸ್ಕೃತಿ ಮತ್ತು ಪರಸ್ಪರ ಆಸಕ್ತಿಯ ಇತರ ವಿಷಯಗಳ ಬಗ್ಗೆ ಮಾತುಕತೆ ನಡೆಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.