ಬೆಂಗಳೂರು: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಕ್ಟೋಬರ್ 10 ರಿಂದ ಮೂರು ದಿನಗಳ ಕಾಲ ಕರ್ನಾಟಕ ಪ್ರವಾಸವನ್ನು ಹಮ್ಮಿಕೊಳ್ಳಲಿದ್ದಾರೆ ಎಂದು ರಾಷ್ಟ್ರಪತಿಭವನದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅಕ್ಟೋಬರ್ 10 ರಂದು ಮೈಸೂರಿಗೆ ಆಗಮಿಸಲಿರುವ ರಾಷ್ಟ್ರಪತಿಗಳು ಅರಮನೆಗೆ ಭೇಟಿ ನೀಡಲಿದ್ದಾರೆ. ಬಳಿಕ ಮೈಸೂರು ಮಹಾರಾಜ ದಿವಂಗತ ಜಯಚಾಮರಾಜ ಒಡೆಯರ್ ಅವರ ಶತಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ.
ಅಕ್ಟೋಬರ್ 11 ರಂದು ರಾಷ್ಟ್ರಪತಿಗಳು ನಂಜನಗೂಡಿನ ಶ್ರೀ ಕಂಠೇಶ್ವರ ದೇಗುಲಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಅದೇ ದಿನ ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆಯಲಿದ್ದಾರೆ. ಜೆಎಸ್ಎಸ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ಗೂ ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ.
ಅಕ್ಟೋಬರ್ 12 ರಂದು ರಾಷ್ಟ್ರಪತಿಗಳು ಬೆಂಗಳೂರಿನ ರಾಜಭವನದಲ್ಲಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಮತ್ತು ನ್ಯಾಯಾಧೀಶರನ್ನು ಭೇಟಿಯಾಗಲಿದ್ದಾರೆ. ನಂತರ ದಿವಂಗತ ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಅವರ ನಿವಾಸಕ್ಕೆ ಭೇಟಿಯನ್ನು ನೀಡಲಿದ್ದಾರೆ.
ಅಕ್ಟೋಬರ್ 13 ರಂದು ಆನೇಕಲ್ ತಾಲೂಕಿನ ಜಿಗಣಿಯಲ್ಲಿರುವ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನ ವಿಶ್ವವಿದ್ಯಾಲಯಕ್ಕೂ (S-VYASA) ಅವರು ಭೇಟಿಯನ್ನು ನೀಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.