ನವದೆಹಲಿ: ಪಶ್ಚಿಮಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಬುಧವಾರದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತ, ಅವರ ಪತ್ನಿ ಮತ್ತು ಅವರ ಆರು ವರ್ಷದ ಮಗನನ್ನು ಬುಧವಾರ ಹತ್ಯೆ ಮಾಡಲಾಗಿದೆ.
ಶಾಲಾ ಶಿಕ್ಷಕರಾಗಿದ್ದ ಬೊಂಧು ಗೋಪಾಲ್ ಪಾಲ್, ಅವರ ಪತ್ನಿ ಬ್ಯೂಟಿ ಪಾಲ್ ಮತ್ತು ಅವರ ಮಗ ಅಂಗನ್ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ದಂಪತಿಗಳು ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದರು ಎಂದು ಹೇಳಲಾಗಿದೆ.
ಈ ಕುಟುಂಬವು ಮುರ್ಷಿದಾಬಾದ್ನ ಜಿಯಗಂಜ್ ಪ್ರದೇಶದಲ್ಲಿ ವಾಸಿಸುತ್ತಿತ್ತು ಎಂದು ವರದಿಗಳು ತಿಳಿಸಿವೆ.
ಕೆಲವು ಅಪರಿಚಿತ ದುಷ್ಕರ್ಮಿಗಳು ಹರಿತವಾದ ಆಯುಧದಿಂದ ಈ ಮೂವರನ್ನು ಇರಿದು ಕೊಲೆ ಮಾಡಿದ್ದಾರೆ. ಹತ್ಯೆಯಾದ ಸ್ಥಳದಿಂದ ಶಸ್ತ್ರಾಸ್ತ್ರವನ್ನು ವಶಪಡಿಸಿಕೊಳ್ಳಲಾಗಿದೆ.
ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಕೊಲೆಗೆ ಕಾರಣ ಇನ್ನೂ ಪತ್ತೆಯಾಗಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.