ವಾಷಿಂಗ್ಟನ್ : ತಾಲಿಬಾನ್ ಸೇರಿದಂತೆ ಇತರ ಭಯೋತ್ಪಾದನಾ ಸಂಘಟನೆಗಳಿಗೆ ಬೆಂಬಲ ನೀಡುವುದನ್ನು ಪಾಕಿಸ್ಥಾನ ನಿಲ್ಲಿಸಬೇಕು ಎಂದು ಅಮೆರಿಕ ಸೆನೆಟರ್ ಹೇಳಿದ್ದಾರೆ.
ಇಸ್ಲಾಮಾಬಾದ್ ನಾಯಕತ್ವದೊಂದಿಗೆ ಮಾತುಕತೆ ನಡೆಸಿದ ಸೆನೆಟರ್ ಮ್ಯಾಗಿ ಹಸನ್ ಅವರು, “ಅಫ್ಘಾನಿಸ್ಥಾನದಲ್ಲಿ ಸ್ಥಿರತೆಯನ್ನು ತರುವ ನಿಟ್ಟಿನಲ್ಲಿ ಪಾಕಿಸ್ಥಾನವು ಮಹತ್ವದ ಪಾತ್ರವನ್ನು ನಿಭಾಯಿಸಬೇಕು, ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಳಲ್ಲಿ ಅದು ತನ್ನನ್ನು ತೊಡಗಿಸಿಕೊಳ್ಳಬೇಕು ಮತ್ತು ಜಾಗತಿಕ ಆರ್ಥಿಕತೆಯನ್ನು ಬಲಗೊಳಿಸಲು ಸಹಕರಿಸಬೇಕು” ಎಂದಿದ್ದಾರೆ.
ಪಾಕಿಸ್ಥಾನ ಪ್ರವಾಸವನ್ನು ಮುಗಿಸಿರುವ ಹಸನ್ ಅವರು ಇಂದು ಬೆಳಗ್ಗೆ ಭಾರತಕ್ಕೆ ಆಗಮಿಸಿದ್ದಾರೆ.
ಹಸನ್ ಮತ್ತು ಇನ್ನೊಬ್ಬ ಸೆನೆಟರ್ ಕ್ರಿಸ್ ವೈನ್ ಹೊಲ್ಲೆನ್ ಅವರು ಪಾಕಿಸ್ತಾನಕ್ಕೆ ಭೇಟಿ ನೀಡಿದ ವೇಳೆ, ಅಲ್ಲಿನ ಪ್ರಧಾನಿ ಇಮ್ರಾನ್ ಖಾನ್, ಸೇನಾಮುಖ್ಯಸ್ಥ ಕಮರ್ ಜಾವೇದ್ ಬಜ್ವ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ.
ಮಾತ್ರವಲ್ಲದೆ ಈ ಇಬ್ಬರು ಸೆನೆಟರ್ ಗಳು ಅಫ್ಘಾನಿಸ್ತಾನಕ್ಕೂ ಭೇಟಿಯನ್ನು ನೀಡಿ, ಅಲ್ಲಿನ ಅಧ್ಯಕ್ಷೀಯ ಅಭ್ಯರ್ಥಿ ಅಬ್ದುಲ್ಲಾ ಅಬ್ದುಲ್ಲಾ ಅವರನ್ನು ಭೇಟಿಯಾಗಿದ್ದಾರೆ. ಅಲ್ಲಿನ ಹಲವಾರು ಮಹಿಳಾ ಅಧಿಕಾರಿಗಳನ್ನು ಭೇಟಿಯಾಗಿ, ಮಾತುಕತೆ ನಡೆಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.