ಬೆಂಗಳೂರು : ನೆರೆಯಿಂದಾಗಿ ತತ್ತರಿಸಿದ ಕರ್ನಾಟಕದ ಜನರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಹೆಚ್ಚುವರಿ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ನೆರೆಯ ಸಂದರ್ಭ ಬೆಳೆ ಹಾನಿಗೊಳಗಾಗಿರುವ ರೈತರಿಗೆ ಒಂದು ಎಕರೆಗೆ 10,000 ರೂಪಾಯಿಗಳ ಹೆಚ್ಚುವರಿ ಪರಿಹಾರವನ್ನು ಅವರು ಘೋಷಣೆ ಮಾಡಿದ್ದಾರೆ.
ವಿಧಾನಸಭೆಯಲ್ಲಿ ನೆರೆ ಪರಿಹಾರದ ಬಗ್ಗೆ ನಡೆದ ಚರ್ಚೆಯ ವೇಳೆ ಮಾಹಿತಿಯನ್ನು ನೀಡಿದ ಅವರು, ಹೆಚ್ಚುವರಿ ಪರಿಹಾರವನ್ನು ನೀಡುವುದಾಗಿ ತಿಳಿಸಿದ್ದಾರೆ. ಅಲ್ಲದೆ ರಾಜ್ಯ ಸರಕಾರದ ಖಜಾನೆಯಿಂದಲೇ ಹಣವನ್ನು ಭರಿಸುವುದಾಗಿ ಅವರು ತಿಳಿಸಿದ್ದಾರೆ.
ರಾಷ್ಟ್ರೀಯ ವಿಪತ್ತು ಸ್ಪಂದನ ನಿಧಿಯಡಿ ಪರಿಹಾರ ಪಡೆಯಲು ಅರ್ಹರಾಗಿರುವವರಿಗೆ ಪ್ರತಿ ಎಕರೆ ಪ್ರದೇಶಕ್ಕೆ ಹತ್ತು ಸಾವಿರ ರೂಪಾಯಿಗಳ ಪರಿಹಾರವನ್ನು ನೀಡಲಾಗುವುದು ಎಂದಿದ್ದಾರೆ. ಈ ಪ್ಯಾಕೇಜ್ ರೇಷ್ಮೆ ಮತ್ತು ಕಾಫಿ ಸೇರಿದಂತೆ ಎಲ್ಲಾ ಬೆಳೆಗಳನ್ನು ಒಳಗೊಂಡಿದೆ ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ.
ನೆರೆಯ ಸಂದರ್ಭದಲ್ಲಿ ಮನೆಯನ್ನು ಕಳೆದುಕೊಂಡು ಮತ್ತು ಮಳೆಯಿಂದಾಗಿ ಶೇಕಡ 75 ರಷ್ಟು ಹಾನಿಗೊಂಡ ಮನೆಗಳಿಗೆ ಐದು ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡುವುದಾಗಿ ಅವರು ಘೋಷಣೆ ಮಾಡಿದ್ದಾರೆ.
“ರಾಜ್ಯ ಸರಕಾರದ ಅಡಿಯಲ್ಲಿ ಲಭ್ಯವಿರುವ ಎಲ್ಲ ಅನುದಾನಗಳನ್ನು ಬಳಸಿಕೊಂಡು ನಾವು ನೆರೆ ಸಂತ್ರಸ್ತರಿಗೆ ಪರಿಹಾರವನ್ನು ನೀಡುತ್ತಿದ್ದೇವೆ ಎಂದಿದ್ದಾರೆ. ಹೆಚ್ಚುವರಿ ಪರಿಹಾರ ಘೋಷಣೆಯಿಂದ ಸರಕಾರದ ಖಜಾನೆಗೆ 2,500 ಕೋಟಿ ರೂಪಾಯಿಗಳ ಹೊರೆ ಬೀಳಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.