ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಟೆಲಿಮೆಡಿಸಿನ್ ಸೇವೆಯನ್ನು ಪರಿಚಯಿಸಲು ಅಲ್ಲಿನ ಆಡಳಿತ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಅದು ಸಂಬಂಧಿತ ಏಜೆನ್ಸಿಗಳೊಂದಿಗೆ ಮಾತುಕತೆಯಲ್ಲಿ ತೊಡಗಿದೆ. ಶ್ರೀನಗರ ಸ್ಮಾರ್ಟ್ ಸಿಟಿ ಯೋಜನೆಯಡಿ ಟೆಲಿಮೆಡಿಸಿನ್ ಸೇವೆಯನ್ನು ಆರಂಭಿಸುವುದಾಗಿ ಅಲ್ಲಿನ ಆಡಳಿತ ಹೇಳಿಕೊಂಡಿದೆ.
“ಶ್ರೀನಗರದಲ್ಲಿ ಟೆಲಿಮೆಡಿಸಿನ್ ಸೇವೆಯನ್ನು ಪರಿಚಯಿಸಲು ನಿರ್ಧರಿಸಲಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಇದನ್ನು ಕಾರ್ಯಗತಗೊಳಿಸಲಾಗುತ್ತಿದೆ. ಸ್ಮಾರ್ಟ್ ಹೆಲ್ತ್ಕೇರ್ ಅನ್ನು ಶ್ರೀನಗರದಲ್ಲಿ ಪ್ರಾರಂಭಿಸುವ ಉದ್ದೇಶದಿಂದ ಟೆಲಿಮೆಡಿಸಿನ್ ಸೇವೆ ಆರಂಭಿಸಲಾಗುತ್ತಿದೆ” ಎಂದು ಆಡಳಿತ ಹೇಳಿದೆ.
ಪ್ರಸ್ತಾಪಿತ ಯೋಜನೆಯಡಿ ಸರಕಾರವು ಎಲ್ಲಾ ಆಸ್ಪತ್ರೆಗಳನ್ನು ಮತ್ತು ಆರೋಗ್ಯ ಸಂಸ್ಥೆಗಳನ್ನು ಪರಸ್ಪರ ಸಂಪರ್ಕಿಸಲಾಗುತ್ತದೆ. ನಂಬಲರ್ಹ ಮತ್ತು ದಿನದ 24 ಗಂಟೆಗಳ ಸ್ಯಾಟಲೈಟ್ ಆಧಾರಿತ ನೆಟ್ವರ್ಕಿಂಗ್ ಚಾನೆಲ್ ಗಳ ಮೂಲಕ ಟೆಲಿಮೆಡಿಸಿನ್ ಅನ್ನು ಕಾರ್ಯಗತಗೊಳಿಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.