ಮುಂಬಯಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಮುಂದಿನ ಬಿಸಿಸಿಐ ಅಧ್ಯಕ್ಷರಾಗಲು ಸಜ್ಜಾಗಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಅವರು ಬಿಸಿಸಿಐ ಕಾರ್ಯದರ್ಶಿ ಆಗಲಿದ್ದಾರೆ. ಅರುಣ್ ಧುಮಲ್ ಅವರು ಮುಂದಿನ ಖಂಜಾಚಿಯಾಗಲಿದ್ದಾರೆ.
ಬಿಸಿಸಿಐ ಅಧ್ಯಕ್ಷ ಮತ್ತು ಕಾರ್ಯದರ್ಶಿ ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆ ಮಾಡಲು ಇಂದು ಕೊನೆಯ ದಿನಾಂಕ. ಆದರೆ ಈಗಾಗಲೇ ಎಲ್ಲಾ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿರುವುದರಿಂದ ಚುನಾವಣೆ ಜರಗುತ್ತಿಲ್ಲ.
ಮುಂಬಯಿಯಲ್ಲಿ ಭಾನುವಾರ ನಡೆದ ಬಿಸಿಸಿಐ ಸದಸ್ಯರ ಅನೌಪಚಾರಿಕ ಸಭೆಯ ಕೊನೆಯಲ್ಲಿ ಮುಂದಿನ ಬಿಸಿಸಿಐ ಅಧ್ಯಕ್ಷ ಹುದ್ದೆಗೆ ಸೌರವ್ ಗಂಗೂಲಿ ಹೆಸರನ್ನು ಉಲ್ಲೇಖ ಮಾಡಲಾಗಿದೆ.
ಪ್ರಸ್ತುತ ಕ್ರಿಕೆಟ್ ಅಸೋಸಿಯೇಷನ್ ಆಫ್ ಬಂಗಾಳ (ಸಿಎಬಿ)ದ ಅಧ್ಯಕ್ಷರಾಗಿರುವ 47 ವರ್ಷದ ಗಂಗೂಲಿ ಅವರು 2020 ರ ಸೆಪ್ಟೆಂಬರ್ನ ವೇಳೆ ತಮ್ಮ ಹುದ್ದೆಯನ್ನು ತ್ಯಜಿಸಬೇಕಾಗುತ್ತದೆ. ಹೀಗಾಗಿ ಒಂದು ವರ್ಷಗಳ ಅವಧಿಗೆ ಅವರು ಅಧ್ಯಕ್ಷರಾಗಲಿದ್ದಾರೆ.
ತಮ್ಮ ನೇಮಕದ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಅವರು, “ನೇಮಕಾತಿಯ ಬಗ್ಗೆ ನನಗೆ ಸಂತೋಷವಾಗಿದೆ, ಯಾಕೆಂದರೆ ಬಿಸಿಸಿಐನ ಇಮೇಜ್ ಹಾಳಾಗಿರುವ ಸಂದರ್ಭದಲ್ಲಿ ನಾನು ಹುದ್ದೆಯನ್ನು ಏರುತ್ತಿದ್ದೇನೆ, ಹೀಗಾಗಿ ಏನನ್ನಾದರು ಮಾಡಲು ಇದು ನನಗೆ ಉತ್ತಮ ಅವಕಾಶವಾಗಿದೆ” ಎಂದಿದ್ದಾರೆ.
“ನಾವು ಅವಿರೋಧವಾಗಿ ಆಯ್ಕೆಯಾದೆವೋ ಅಥವಾ ಇಲ್ಲವೋ ಎಂಬುದು ಮುಖ್ಯವಲ್ಲ, ಹುದ್ದೆಗೆ ಆಯ್ಕೆಯಾಗಿದ್ದು ದೊಡ್ಡ ಜವಾಬ್ದಾರಿಯಾಗಿದೆ. ಯಾಕೆಂದರೆ ಬಿಸಿಸಿಐ ಕ್ರಿಕೆಟ್ ಜಗತ್ತಿನ ಅತಿದೊಡ್ಡ ಸಂಸ್ಥೆಯಾಗಿದೆ. ಭಾರತವು ಒಂದು ಶಕ್ತಿ ಕೇಂದ್ರವಾಗಿದೆ. ಇದು ಒಂದು ಸವಾಲು” ಎಂದಿದ್ದಾರೆ.
ಬಂಗಾಳದ ಹುಲಿ ಎಂದೇ ಕರೆಸಿಕೊಳ್ಳುವ ಗಂಗೂಲಿ ಭಾರತೀಯ ಕ್ರಿಕೆಟ್ ಕಂಡ ಅಪ್ರತಿಮ ಆಟಗಾರರಲ್ಲಿ ಒಬ್ಬರಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.