ನವದೆಹಲಿ: ತಮ್ಮ ಜನಪ್ರಿಯ ಕಾರ್ಯಕ್ರಮ ‘ಮನ್ ಕೀ ಬಾತ್’ನ ದೀಪಾವಳಿ ಸಂಚಿಕೆಗೆ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರ ಸಲಹೆ ಸೂಚನೆಗಳನ್ನು ಕೇಳಿದ್ದಾರೆ. ಅಕ್ಟೋಬರ್ 27ರಂದು ಮುಂದಿನ ಮನ್ ಕೀ ಬಾತ್ ಜರುಗಲಿದ್ದು, ಅಂದು ದೀಪಾವಳಿ ಎಂಬುದು ವಿಶೇಷ.
ಟ್ವಿಟ್ ಮಾಡಿರುವ ಪ್ರಧಾನಿ ಮೋದಿ, “ಈ ತಿಂಗಳ ಮನ್ ಕೀ ಬಾತ್ ಕಾರ್ಯಕ್ರಮ ಅಕ್ಟೋಬರ್ 27ರಂದು ಜರುಗಲಿದೆ. ಆ ದಿನ ದೀಪಾವಳಿ ಕೂಡ ಆಗಿದೆ. ಕಾರ್ಯಕ್ರಮಕ್ಕೆ ನಿಮ್ಮ ಸಲಹೆ ಸೂಚನೆಗಳನ್ನು ನೀಡಿ. 1800-11-7800ಗೆ ಡಯಲ್ ಮಾಡಿ, ನಮೋ ಆ್ಯಪ್ ಅಥವಾ ಮೈಗೌ ಮುಕ್ತ ವೇದಿಕೆಯಲ್ಲಿ ಅಭಿಪ್ರಾಯ ಹಂಚಿಕೊಳ್ಳಿ” ಎಂದಿದ್ದಾರೆ.
ಕಳೆದ ತಿಂಗಳು 57ನೇ ಮನ್ ಕೀ ಬಾತ್ ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿಯವರು, ಸಮಾಜದಲ್ಲಿ ಬದಲಾವಣೆಯನ್ನು ತಂದ ಹೆಣ್ಣು ಮಕ್ಕಳನ್ನು ಗೌರವಿಸಲು #ಭಾರತ್_ಕಿ_ಲಕ್ಷ್ಮೀ ಹ್ಯಾಶ್ ಟ್ಯಾಗ್ ಬಳಸಿ ಸಾಧನೆ ಮಾಡಿದ ಹೆಣ್ಣು ಮಕ್ಕಳ ಬಗ್ಗೆ ತಿಳಿಸುವಂತೆ, ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ನಡೆಸುವಂತೆ ಕೋರಿದ್ದರು.
ಮನ್ ಕೀ ಬಾತ್ ಮೋದಿಯವರು ಜನರನ್ನು ನೇರವಾಗಿ ತಲುಪುವ ನಿಟ್ಟಿನಲ್ಲಿ ಹಮ್ಮಿಕೊಂಡ ಪ್ರಸಿದ್ಧ ರೇಡಿಯೋ ಕಾರ್ಯಕ್ರಮ. ಇಲ್ಲಿ ಅವರು ಹತ್ತು ಹಲವು ಪ್ರಚಲಿತ ವಿಷಯಗಳ ಬಗ್ಗೆ ತಮ್ಮ ಮನಸ್ಸಿನ ಭಾವನೆಯನ್ನು ವ್ಯಕ್ತಪಡಿಸುತ್ತಾರೆ.
This month’s #MannKiBaat will take place on 27th October, which is also the day of Diwali.
Share your inputs for the programme. Dial 1800-11-7800, write on the NaMo App or on the MyGov Open Forum! https://t.co/iQUpDOtGCf pic.twitter.com/B4pwYJlQQd
— Narendra Modi (@narendramodi) October 15, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.