ಅಕೋಲಾ: ರಾಜಕೀಯ ಅವಕಾಶವಾದಿಗಳ ಬಗ್ಗೆ ಟೀಕಾ ಪ್ರಹಾರ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, 370 ನೇ ವಿಧಿಯನ್ನು ರದ್ದುಪಡಿಸಿರುವುದಕ್ಕೂ ಮತ್ತು ಮಹಾರಾಷ್ಟ್ರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿರುವ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡರು. ಜಮ್ಮು ಮತ್ತು ಕಾಶ್ಮೀರ ಮತ್ತು ಅಲ್ಲಿನ ಜನರು ಭಾರತ ಮಾತೆಯ ಮಕ್ಕಳು ಎಂದು ಒತ್ತಿ ಹೇಳಿದರು.
ಮಹಾರಾಷ್ಟ್ರದ ಅಕೋಲಾದಲ್ಲಿ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, “ರಾಜಕೀಯ ಲಾಭಕ್ಕಾಗಿ, 370 ನೇ ವಿಧಿಗೂ ಮಹಾರಾಷ್ಟ್ರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕೆಲವರು ಬಹಿರಂಗವಾಗಿ ಹೇಳುತ್ತಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಮತ್ತು ಅದರ ಜನರು ಕೂಡ ತಾಯಿ ಭಾರತಿಯ ಪುತ್ರರು ಎಂದು ನಾನು ಅಂತಹ ಜನರಿಗೆ ಹೇಳಲು ಬಯಸುತ್ತೇನೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
“ರಾಜಕೀಯ ಅವಕಾಶವಾದಿಗಳ ಆಲೋಚನೆ ನನ್ನನ್ನು ಆಂತರಿಕವಾಗಿ ನೋಯಿಸುತ್ತದೆ. ಮಹಾರಾಷ್ಟ್ರಕ್ಕೂ ಜಮ್ಮು ಮತ್ತು ಕಾಶ್ಮೀರಕ್ಕೂ ಏನು ಸಂಬಂಧವಿಲ್ಲ ಎಂದು ಅವರು ಹೇಗೆ ಹೇಳಲು ಸಾಧ್ಯ” ಎಂದು ಅವರು ಪ್ರಶ್ನಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರಕ್ಕಾಗಿ ತ್ಯಾಗ ಮಾಡಿದ ಮಹಾರಾಷ್ಟ್ರದ ಪುತ್ರರ ಬಗ್ಗೆ ರಾಷ್ಟ್ರವು ಹೆಮ್ಮೆಪಡುತ್ತದೆ ಎಂದು ಹೇಳಿದ ಅವರು, ಗಡಿಯ ಇನ್ನೊಂದು ಬದಿಯಿಂದ ಬರುವ ಭಯೋತ್ಪಾದನೆಯನ್ನು ಎದುರಿಸಲು ಇಡೀ ದೇಶವು ಈ ಪ್ರದೇಶದ ದೇಶಭಕ್ತ ಜನರೊಂದಿಗೆ ನಿಂತಿದೆ ಎಂದಿದ್ದಾರೆ.
ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಶ್ಲಾಘಿಸಿದ ಪ್ರಧಾನಿಯವರು, ಅವರ ನಾಯಕತ್ವದಲ್ಲಿ ಮಹಾರಾಷ್ಟ್ರವು ಅಭಿವೃದ್ಧಿಗೆ ಸಾಕ್ಷಿಯಾಗಿದೆ ಎಂದು ಹೇಳಿದರು.
“ಫಡ್ನವೀಸ್ಗೂ ಮೊದಲು, ಕೇವಲ ಒಂದು ಗುರಿಯನ್ನು ಹೊಂದಿದ್ದ ಸರ್ಕಾರವನ್ನು ನೀವು ನೋಡಿದ್ದೀರಿ. ಆ ಸರ್ಕಾರದ ಗುರಿ ಸ್ವಂತ ಪ್ರಗತಿ ಮತ್ತು ಅವರ ಕುಟುಂಬಗಳ ಪ್ರಗತಿ. ಆದರೆ ಇಂದು, ಬಿಜೆಪಿ ಸರ್ಕಾರವು ಮಹಾರಾಷ್ಟ್ರದ ಪ್ರಗತಿಯನ್ನು, ಅದರ ಜನರ ಪ್ರಗತಿಯ ಗುರಿಯನ್ನು ಮಾತ್ರ ಹೊಂದಿದೆ ಎಂದು ಅವರು ಹೇಳಿದ್ದಾರೆ.
ಚುನಾವಣೆಗಳು ಪ್ರಜಾಪ್ರಭುತ್ವದ ಹಬ್ಬವಾಗಿದ್ದು, ಈ ಹಬ್ಬವನ್ನು ಆಚರಿಸುವಲ್ಲಿ ಯಾರೂ ಹಿಂದುಳಿಯಬಾರದು ಎಂದು ಮೋದಿ ಕರೆ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.