ವಾಷಿಂಗ್ಟನ್: ಹೂಡಿಕೆದಾರರಿಗೆ ಹೂಡಿಕೆ ಮಾಡಲು ಭಾರತಕ್ಕಿಂತ ಉತ್ತಮ ಸ್ಥಳವಿಲ್ಲ, ಪ್ರಜಾಪ್ರಭುತ್ವವನ್ನು ಪ್ರೀತಿಸುವ ಮತ್ತು ಹೂಡಿಕೆಯನ್ನು ಗೌರವಿಸುವ ವಾತಾವರಣ ಭಾರತದಲ್ಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.
ಯುಎಸ್- ಇಂಡಿಯಾ ಸ್ಟ್ರಾಟೆಜಿಕ್ ಮತ್ತು ಪಾರ್ಟ್ನರ್ಶಿಪ್ ಫೋರಂ ಸಹಯೋಗದೊಂದಿಗೆ ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಅಥವಾ ಎಫ್ಐಸಿಸಿಐ, ಐಎಂಎಫ್ (ಇಂಟರ್ನ್ಯಾಷನಲ್ ಮಾನಿಟರಿ ಫಂಡ್) ನ ಪ್ರಧಾನ ಕಚೇರಿಯಲ್ಲಿ ಆಯೋಜಿಸಿದ್ದ ಸಂವಾದ ಭಾಗವಹಿಸಿ ಅವರು ಮಾತನಾಡಿದರು.
ಸುಧಾರಣೆಗಳನ್ನು ತರಲು ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಅವರು ಅಂತಾರಾಷ್ಟ್ರೀಯ ಹೂಡಿಕೆದಾರರಿಗೆ ಭರವಸೆ ನೀಡಿದರು.
“ಭಾರತ ಇಂದಿಗೂ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗಿದೆ. ಇದು ಅತ್ಯುತ್ತಮ ನುರಿತ ಮಾನವಶಕ್ತಿ ಮತ್ತು ಸರ್ಕಾರವನ್ನು ಹೊಂದಿದೆ, ಇದು ಸುಧಾರಣೆಗಳ ಹೆಸರಿನಲ್ಲಿ ಅಗತ್ಯವಿರುವದನ್ನು ನಿರಂತರವಾಗಿ ಮಾಡುತ್ತಿದೆ, ಎಲ್ಲಕ್ಕಿಂತ ಹೆಚ್ಚಾಗಿ ಪ್ರಜಾಪ್ರಭುತ್ವ ಮತ್ತು ಕಾನೂನಿನ ನಿಯಮಗಳನ್ನು ಅಚ್ಚುಕಟ್ಟಾಗಿ ಪಾಲಿಸುತ್ತಿದೆ” ಎಂದು ಅವರು ವಿವರಿಸಿದ್ದಾರೆ.
ಹೂಡಿಕೆದಾರರು ಭಾರತದಲ್ಲಿ ಯಾಕೆ ಹಣವನ್ನು ವಿನಿಯೋಗಿಸಬೇಕು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ನ್ಯಾಯಾಲಯದ ವ್ಯವಸ್ಥೆಯು ಸ್ವಲ್ಪ ವಿಳಂಬವಾದರೂ, ಭಾರತವು ಪಾರದರ್ಶಕ ಮತ್ತು ಮುಕ್ತ ಸಮಾಜವಾಗಿದೆ. ಕಾನೂನಿನ ನಿಯಮವು ಕಾರ್ಯನಿರ್ವಹಿಸುತ್ತದೆ ಮತ್ತು ವಿಳಂಬವನ್ನು ಕಡಿಮೆ ಮಾಡಲು ಸಹ ಸಾಕಷ್ಟು ಸುಧಾರಣೆಗಳು ನಡೆಯುತ್ತಿವೆ” ಎಂದು ಅವರು ಹೇಳಿದ್ದಾರೆ.
ಭಾರತದಲ್ಲಿ ಹಣಕಾಸಿನ ಕೊರತೆಯನ್ನು ನೀಗಿಸಲು ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.
ಭಾರತದ ಆರ್ಥಿಕತೆಯ ಮಂದಗತಿಯ ಕುರಿತ ಪ್ರಶ್ನೆಗೆ ವಿತ್ತ ಸಚಿವರು, ಒತ್ತಡಕ್ಕೊಳಗಾದ ಕ್ಷೇತ್ರಗಳಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.