ನವದೆಹಲಿ: ಅಯೋಧ್ಯಾದ ವಿವಾದಿತ ಭೂಮಿ ಮೇಲೆ ತಾನು ಪ್ರತಿಪಾದನೆ ಮಾಡಿರುವ ಹಕ್ಕನ್ನು ಕೈಬಿಡಲು ಸುನ್ನಿ ವಕ್ಫ್ ಮಂಡಳಿ ಮುಂದಾಗಿದೆ. ದೇಗುಲ ನಿರ್ಮಾಣ ಮಾಡುವುದಕ್ಕೆ ವಿವಾದಾತ್ಮಕ ಜಾಗವನ್ನು ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಳ್ಳುವುದಕ್ಕೆ ನಮ್ಮ ಯಾವ ಅಭ್ಯಂತರವೂ ಇಲ್ಲ ಎಂಬುದಾಗಿ ಅದು ಹೇಳಿಕೊಂಡಿದೆ. ಈ ಬಗ್ಗೆ ಸುಪ್ರೀಂಕೋರ್ಟ್ ರಚನೆ ಮಾಡಿದ ಮಧ್ಯಸ್ಥಿಕೆ ಸಮಿತಿ ತನ್ನ ವರದಿಯಲ್ಲಿ ಹೇಳಿಕೊಂಡಿದೆ.
ವಿವಾದಿತ ಭೂಮಿ ಬದಲಿಗೆ ಬೇರೆಡೆ ಸ್ಥಳ ನೀಡಿ ಎಂದು ಸುನ್ನಿ ವಕ್ಫ್ ಮಂಡಳಿ ಮನವಿ ಮಾಡಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಅಯೋಧ್ಯೆ ಪ್ರಕರಣವನ್ನು ಸುಪ್ರೀಂ ಕೋರ್ಟ್ನಿಂದ ಹಿಂಪಡೆಯಲು ಸುನ್ನಿ ವಕ್ಫ್ ಮಂಡಳಿ ನಿರ್ಧರಿಸಿದೆ. ಮಂಡಳಿಯ ಅಧ್ಯಕ್ಷರು ಮಧ್ಯಸ್ಥಿಕೆ ಸಮಿತಿಯ ಸದಸ್ಯರಾದ ಶ್ರೀರಾಮ್ ಪಂಚು ಅವರಿಗೆ ಪ್ರಕರಣವನ್ನು ಹಿಂಪಡೆಯಲು ಅಫಿಡವಿಟ್ ಕಳುಹಿಸಿದೆ. ಮಧ್ಯಸ್ಥಿಕೆ ಸಮಿತಿಯು ವರದಿಯನ್ನು ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿದೆ.
ಧ್ವಂಸಗೊಂಡ ಬಾಬರಿ ಮಸೀದಿಯ ಸ್ಥಳದ ಮೇಲಿನ ತನ್ನ ಹಕ್ಕನ್ನು ಬಿಟ್ಟುಕೊಡಲು ಒಪ್ಪಿಕೊಳ್ಳುವುದರ ಜೊತೆಗೆ, ಅಯೋಧ್ಯೆಯಲ್ಲಿ ಅಸ್ತಿತ್ವದಲ್ಲಿರುವ ಮಸೀದಿಗಳನ್ನು ಸರ್ಕಾರವು ನವೀಕರಿಸಬೇಕೆಂದು ವಕ್ಫ್ ಮಂಡಳಿ ಮನವಿ ಮಾಡಿದೆ. ವಕ್ಫ್ ಮಂಡಳಿಯು ಬೇರೆ ಯಾವುದೇ ಸೂಕ್ತ ಸ್ಥಳದಲ್ಲಿ ಮಸೀದಿ ನಿರ್ಮಿಸಲು ಸಿದ್ಧವಿರುವುದಾಗಿ ಹೇಳಿಕೊಂಡಿದೆ.
134 ವರ್ಷಗಳ ಹಳೆಯ ರಾಮ ಜನ್ಮಭೂಮಿ-ಬಾಬರಿ ಮಸೀದಿ ವಿವಾದವು ಅಂತಿಮ ಘಟ್ಟಕ್ಕೆ ಬರುವ ಸಂದರ್ಭದಲ್ಲಿ ಸುನ್ನಿ ವಕ್ಫ್ ಮಂಡಳಿ ನಿರ್ಧಾರ ನಿಜಕ್ಕೂ ಕುತೂಹಲಕಾರಿಯಾಗಿದೆ.
ನವೆಂಬರ್ 17ರಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ರಂಜನ್ ಗೋಗಯ್ ಅವರು ನಿವೃತ್ತರಾಗಲಿದ್ದು, ಅದಕ್ಕಿಂತ ಮುಂಚೆ ತೀರ್ಪು ಹೊರಬೀಳಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.