ನವದೆಹಲಿ: ಯೂನಿವರ್ಸಿಟಿ ಗ್ರ್ಯಾಂಟ್ಸ್ ಕಮಿಷನ್ (ಯುಜಿಸಿ) ತನ್ನ ಜವಾಬ್ದಾರಿಗಳನ್ನು ನಿರ್ವಹಿಸುವಲ್ಲಿ ವಿಫಲವಾಗಿದ್ದು, ಅಗತ್ಯ ಬಿದ್ದರೆ ಅದನ್ನು ಕಿತ್ತು ಹಾಕಲು ಶಿಫಾರಸ್ಸು ಮಾಡುವುದಾಗಿ ಪರಿಶೀಲನಾ ಸಮಿತಿ ಹೇಳಿದೆ.
ಅಲ್ಲದೇ ಯುಜಿಸಿಎ ಬದಲಿಗೆ ನ್ಯಾಷನಲ್ ಹೈಯರ್ ಎಜುಕೇಶನ್ ಅಥಾರಟಿಯನ್ನು ತರಬೇಕು ಎಂದು ಸಲಹೆ ನೀಡಿದೆ. ಒಂದು ವೇಳೆ ಯುಜಿಸಿಯನ್ನು ತೆಗೆದು ಹಾಕಲು ಸಾಧ್ಯವಿಲ್ಲ ಎಂದಾದರೆ ಅದರ ಕಾರ್ಯನಿರ್ವಹಣಾ ಶೈಲಿಯನ್ನು ಉತ್ತಮಪಡಿಸಬೇಕು ಎಂದಿದೆ.
ಆದರೆ ಯುಜಿಸಿಯನ್ನು ಸಂಪೂರ್ಣ ಕಿತ್ತು ಹಾಕಲು ಸಾಧ್ಯ ಇಲ್ಲ, ಈ ಬಗ್ಗೆ ಸಚಿವೆ ಸ್ಮೃತಿ ಇರಾನಿಯೊಂದಿಗೆ ಚರ್ಚೆ ನಡೆಸಲಾಗುತ್ತದೆ ಮತ್ತು ಪರಿಶೀಲನಾ ಸಮಿತಿ ಶಿಫಾರಸ್ಸಿನ ಬಗ್ಗೆ ಗಂಭೀರವಾಗಿ ಪರಿಗಣಿಸಲಾಗುತ್ತದೆ ಎಚ್ಆರ್ಡಿ ಸಚಿವಾಲಯ ತಿಳಿಸಿದೆ.
ಆರು ತಿಂಗಳ ಹಿಂದೆಯಷ್ಟೇ ಎಚ್ಆರ್ಡಿ ಸಚಿವಾಲಯ ಯುಜಿಸಿಯ ಕಾರ್ಯನಿರ್ವಹಣೆಯ ಬಗ್ಗೆ ಪರಿಶೀಲನೆ ನಡೆಸಲು ಪರಿಶೀಲನಾ ಸಮಿತಿಯನ್ನು ರಚಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.