ಮುಂಬಯಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರದ ಕ್ರಮವನ್ನು ಟೀಕಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಮೇಲೆ ತೀವ್ರ ವಾಗ್ದಾಳಿಯನ್ನು ನಡೆಸಿದರು.
“370 ನೇ ವಿಧಿಯನ್ನು ಇತಿಹಾಸವಾಗಿ ಚರ್ಚಿಸುವಾಗ, ಅದನ್ನು ವಿರೋಧಿಸಿದವರ ಮತ್ತು ಅಪಹಾಸ್ಯ ಮಾಡಿದವರನ್ನು ಖಂಡಿತವಾಗಿಯೂ ನೆನಪಿಸಿಕೊಳ್ಳಲಾಗುತ್ತದೆ” ಎಂದು ಪ್ರಧಾನಿ ಹೇಳಿದ್ದಾರೆ.
ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಪಾರ್ಲಿಯಲ್ಲಿ ಗುರುವಾರ ಪಕ್ಷದ ಚುನಾವಣಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ ಪ್ರಧಾನಿ ಮೋದಿ ಈ ಹೇಳಿಕೆಯನ್ನು ನೀಡಿದ್ದಾರೆ.
ಮುಂದಿನ ವಾರ ನಡೆಯಲಿರುವ ವಿಧಾನಸಭಾ ಚುನಾವಣೆಯು ಬಿಜೆಪಿಯ ಕಾರ್ಯಶಕ್ತಿ ಮತ್ತು ಪ್ರತಿಪಕ್ಷದ ಸ್ವಾರ್ಥಶಕ್ತಿ ನಡುವಿನ ಯುದ್ಧವಾಗಿದೆ ಎಂದಿದ್ದಾರೆ.
ಕಾಶ್ಮೀರದಿಂದ 370ನೇ ವಿಧಿಯನ್ನು ತೆಗೆದರೆ ಭಾರತ ನಾಶವಾಗಲಿದೆ ಎಂದು ಕಾಂಗ್ರೆಸ್ ಹೇಳಿತ್ತು, ವಿಧಿಯನ್ನು ತೆಗೆದು ಮೂರು ತಿಂಗಳಾಯಿತು ಭಾರತ ನಾಶವಾಯಿತೇ? ಎಂದು ಅವರು ಪ್ರಶ್ನಿಸಿದ್ದಾರೆ.
ಅಲ್ಲದೇ, ಸಾರ್ವಜನಿಕ ಹಣವನ್ನು ಲೂಟಿ ಮಾಡಿದವರನ್ನು ಜೈಲಿಗೆ ಹಾಕುವ ಪ್ರಕ್ರಿಯೆ ಆರಂಭವಾಗಿದೆ ಎಂದು ಅವರು ಹೇಳಿದ್ದಾರೆ.
ಅಕ್ಟೋಬರ್ 21ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ವಿಜಯದ ದಾಖಲೆಯನ್ನು ಮುರಿಯಲಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.