ಲಕ್ನೋ: ಲಕ್ನೋದಲ್ಲಿನ ತನ್ನ ಕಚೇರಿಯಲ್ಲಿ ಶುಕ್ರವಾರ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಸಮಾಜ ಪಕ್ಷದ ಮುಖಂಡ ಕಮಲೇಶ್ ತಿವಾರಿ ಅವರ ಕೊಲೆ ಪ್ರಕರಣದ ತನಿಖೆ ಕ್ಷಿಪ್ರಗತಿಯಲ್ಲಿ ಸಾಗುತ್ತಿದ್ದು, ಇಬ್ಬರು ಮೌಲಾನಾಗಳ ವಿರುದ್ಧ ಪೊಲೀಸರು ಎಫ್ ಐ ಆರ್ ದಾಖಲು ಮಾಡಿದ್ದಾರೆ. ಕಮಲೇಶ್ ಪತ್ನಿ ನೀಡಿದ ದೂರಿನ ಮೇರೆಗೆ ಎಫ್ ಐ ಆರ್ ದಾಖಲು ಮಾಡಲಾಗಿದೆ. ಈ ಇಬ್ಬರು ಮೌಲಾನಗಳು ಕಮಲೇಶ್ ಅವರ ಶಿರಚ್ಛೇಧ ಮಾಡಿದವರಿಗೆ 51 ಲಕ್ಷ ರೂಪಾಯಿಗಳ ಬಹುಮಾನವನ್ನು ನೀಡುವುದಾಗಿ ಈ ಹಿಂದೆ ಘೋಷಣೆ ಮಾಡಿದ್ದರು ಎನ್ನಲಾಗಿದೆ.
ಹಿಂದೂ ಸಮಾಜ ಪಕ್ಷದ ಮುಖಂಡನಾಗಿರುವ ಕಮಲೇಶ್ ಅವರು, ಹಿಂದೂಮಹಾಸಭಾದ ಮಾಜಿ ಸದಸ್ಯರೂ ಆಗಿದ್ದರು. ಹಿಂದೂ ಪರ ಹೋರಾಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು. ಉತ್ತರಪ್ರದೇಶದ ಲಕ್ನೋದ ನಾಕಾ ಪ್ರದೇಶದಲ್ಲಿ ಅಪರಿಚಿತರು ಇವರ ಕಛೇರಿಗೆ ನುಗ್ಗಿ ಗುಂಡಿಕ್ಕಿ ಕೊಂದಿದ್ದಾರೆ.
ಮುಸ್ಲಿಂ ಪ್ರವಾದಿ ಮೊಹಮ್ಮದರ ವಿರುದ್ಧ ಹೇಳಿಕೆಯನ್ನು ನೀಡಿದ್ದಕ್ಕಾಗಿ ಇವರ ಕೊಲೆ ಮಾಡಲಾಗಿದೆ ಎನ್ನಲಾಗಿದೆ.
ಬಿಜ್ನೋರ್ನ ಮೌಲಾನಾ ಅನ್ವರುಲ್ ಹಕ್ ವಿರುದ್ಧ ಕಮಲೇಶ್ ಪತ್ನಿ ದೂರು ದಾಖಲಿಸಿದ್ದಾರೆ. ಈತ 2015 ರಲ್ಲಿ ಕಮಲೇಶ್ ಶಿರಚ್ಛೇದ ಮಾಡಿದವರಿಗೆ 51 ಲಕ್ಷ ರೂ.ಗಳ ಬಹುಮಾನವನ್ನು ಘೋಷಿಸಿದ್ದ ಎನ್ನಲಾಗಿದೆ. ಲಕ್ನೋ ಪೊಲೀಸರು ಬಿಜ್ನೋರ್ನ ಇನ್ನೊಬ್ಬ ಮೌಲಾನ ವಿರುದ್ಧವೂ ಎಫ್ಐಆರ್ ದಾಖಲಿಸಿದ್ದಾರೆ.
ಈ ಇಬ್ಬರು 2016 ರಲ್ಲಿ ತನ್ನ ಗಂಡನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು ಎಂದು ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.
ಮೌಲಾನಾ ಅನ್ವರುಲ್ ಹಕ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿತ್ತು, ಆದರೆ ಎವಿಜಿ ಬರೇಲಿ ವಲಯದ ಅವಿನಾಶ್ ಚಂದ್ರ ಅವರು ಬಂಧಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ, ಇನ್ನೂ ತನಿಖೆ ನಡೆಯುತ್ತಿದೆ.
ಕಮಲೇಶ್ ತಿವಾರಿ ಕೊಲೆ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.