ನವದೆಹಲಿ: ಸೈನಿಕ ಶಾಲೆಗಳಿಗೆ ಹೆಣ್ಣು ಮಕ್ಕಳನ್ನು ದಾಖಲುಗೊಳಿಸುವ ಪ್ರಸ್ತಾಪವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅನುಮೋದಿಸಿದ್ದಾರೆ. ಹೆಣ್ಣು ಮಕ್ಕಳ ದಾಖಲಾತಿಯು 2021-22ರ ಶೈಕ್ಷಣಿಕ ವರ್ಷದಿಂದ ಹಂತಹಂತವಾಗಿ ಜಾರಿಯಾಗಲಿದೆ.
ಎರಡು ವರ್ಷಗಳ ಹಿಂದೆ ಮಿಜೋರಾಂನ ಸೈನಿಕ್ ಸ್ಕೂಲ್ ಚಿಂಗ್ಶಿಪ್ನಲ್ಲಿ ಹೆಣ್ಣು ಮಕ್ಕಳನ್ನು ದಾಖಲಿಸಿಕೊಳ್ಳುವ ಪ್ರಾಯೋಗಿಕ ಯೋಜನೆಯನ್ನು ರಕ್ಷಣಾ ಸಚಿವಾಲಯ ಪ್ರಾರಂಭಿಸಿತ್ತು. ಇದು ಅತ್ಯಂತ ಯಶಸ್ಸನ್ನು ಕಂಡಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತದ ಸೈನಿಕ ಶಾಲೆಗಳಲ್ಲಿ ಹೆಣ್ಣು ಮಕ್ಕಳನ್ನು ದಾಖಲಿಸಿಕೊಳ್ಳುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಈ ನಿರ್ಧಾರವನ್ನು ಸುಗಮವಾಗಿ ಅನುಷ್ಠಾನಗೊಳಿಸುವ ಸಲುವಾಗಿ, ಸೈನಿಕ್ ಶಾಲೆಗಳಲ್ಲಿ ಅಗತ್ಯ ಮೂಲಸೌಕರ್ಯಗಳ ಲಭ್ಯತೆ ಇರುವುದನ್ನು ಮತ್ತು ಸಾಕಷ್ಟು ಮಹಿಳಾ ಸಿಬ್ಬಂದಿಗಳ ಲಭ್ಯತೆ ಇರುವುದನ್ನು ಖಾತ್ರಿಪಡಿಸಿಕೊಳ್ಳುವಂತೆ ಸಚಿವರು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಈ ನಿರ್ಧಾರವು ಹೆಚ್ಚಿನ ಒಳಗೊಳ್ಳುವಿಕೆ, ಲಿಂಗ ಸಮಾನತೆ, ಸಶಸ್ತ್ರ ಪಡೆಗಳಲ್ಲಿ ಮಹಿಳೆಯರ ಹೆಚ್ಚಿನ ಭಾಗವಹಿಸುವಿಕೆಗೆ ಅನುವು ಮಾಡಿಕೊಡಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ‘ಬೇಟಿ ಬಚಾವೊ ಬೇಟಿ ಪಡಾವೊ’ ಧ್ಯೇಯ ವಾಕ್ಯವನ್ನು ಬಲಪಡಿಸುವ ಸರ್ಕಾರದ ಉದ್ದೇಶಕ್ಕೂ ಅನುಗುಣವಾಗಿರಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.