ಮುಂಬಯಿ: ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳಲ್ಲಿ ಇಂದು ವಿಧಾನಸಭಾ ಚುನಾವಣೆ ಜರುಗುತ್ತಿದೆ. ದೇಶದ ಇತರ ಭಾಗಗಳಲ್ಲೂ ಉಪ ಚುನಾವಣೆ ಜರುಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಟ್ವಿಟ್ ಮಾಡಿ, ಅಪಾರ ಪ್ರಮಾಣದಲ್ಲಿ ಮತ ಚಲಾವಣೆ ಮಾಡಿ ಪ್ರಜಾಪ್ರಭುತ್ವದ ಅತೀ ದೊಡ್ಡ ಹಬ್ಬವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದ್ದಾರೆ.
ಮಹಾರಾಷ್ಟ್ರದ 288 ಸ್ಥಾನಗಳ ವಿಧಾನಸಭೆಗೆ ಚುನಾವಣೆ ಜರುಗುತ್ತಿದೆ. ಬಿಜೆಪಿ 150 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು, ಶಿವಸೇನೆ 124 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಇತರ ಮೈತ್ರಿ ಪಕ್ಷಗಳು 14 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿವೆ. ಇನ್ನು ಕಾಂಗ್ರೆಸ್ ಮತ್ತು ಎನ್ ಸಿ ಪಿ ಮೈತ್ರಿ ಪಕ್ಷಗಳ ಪೈಕಿ ಎರಡೂ ತಲಾ 125 ಸ್ಥಾನಗಳಲ್ಲಿ ಸ್ಪರ್ಧೆ ನಡೆಸುತ್ತಿದೆ. ಉಳಿದ 40 ಸ್ಥಾನಗಳನ್ನು ಸಮಾಜವಾದಿ, ಸಿಪಿಐ ಮುಂತಾದ ಪಕ್ಷಗಳಿಗೆ ಬಿಟ್ಟುಕೊಟ್ಟಿದೆ.
ಹರಿಯಾಣದ 90 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಮತ್ತೊಮ್ಮೆ ಇಲ್ಲಿ ಅಧಿಕಾರದ ಗದ್ದುಗೆಯನ್ನು ಏರುವ ನಿರೀಕ್ಷೆ ಇದೆ. ಕಳೆದ ಬಾರಿ 47 ಸ್ಥಾನಗಳನ್ನು ಅದು ಗೆದ್ದುಕೊಂಡಿತ್ತು, ಈ ಬಾರಿ 75 ಸ್ಥಾನಗಳಲ್ಲಿ ಗೆಲ್ಲುವ ಗುರಿಯನ್ನು ಅದು ಇಟ್ಟುಕೊಂಡಿದೆ.
ಇಂದು ಒಟ್ಟು 17 ರಾಜ್ಯಗಳ 51 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಜರುಗುತ್ತಿದೆ, ಕೇಂದ್ರಾಡಳಿತ ಪ್ರದೇಶದ ಒಂದು ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದೆ.
ಉತ್ತರಪ್ರದೇಶದ 11 ಕ್ಷೇತ್ರಗಳಿಗೆ, ಗುಜರಾತ್ನ 6, ಬಿಹಾರದಲ್ಲಿ 5, ಅಸ್ಸಾಂನಲ್ಲಿನ ನಾಲ್ಕು ಮತ್ತು ಹಿಮಾಚಲ ಪ್ರದೇಶ ಮತ್ತು ತಮಿಳುನಾಡಿನಲ್ಲಿ ತಲಾ ಎರಡು ಸ್ಥಾನಗಳಿಗೆ ಇಂದು ಉಪಚುನಾಣೆ ಜರಗುತ್ತಿದೆ.
ಅಕ್ಟೋಬರ್ 24ರಂದು ಎಲ್ಲಾ ಕ್ಷೇತ್ರಗಳ ಫಲಿತಾಂಶ ಹೊರಬೀಳಲಿದೆ.
Elections are taking place for Haryana and Maharashtra assemblies. There are also by-polls taking place in various parts of India. I urge voters in these states and seats to turnout in record numbers and enrich the festival of democracy. I hope youngsters vote in large numbers.
— Narendra Modi (@narendramodi) October 21, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.