ಶ್ರೀನಗರ: ಪೊಲೀಸ್ ಸಂಸ್ಮರಣಾ ದಿನಾಚರಣೆಯ ಮುನ್ನಾದಿನವಾದ ಭಾನುವಾರ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಕಳೆದ ಮೂವತ್ತು ವರ್ಷಗಳಲ್ಲಿ ರಾಜ್ಯದಲ್ಲಿ ಭಯೋತ್ಪಾದಕರ ವಿರುದ್ಧ ಹೋರಾಡಿ ಹುತಾತ್ಮರಾದ 1555 ಪೊಲೀಸರಿಗೆ ಗೌರವ ನಮನಗಳನ್ನು ಸಲ್ಲಿಸಿದರು. ಈ ಮೂಲಕ ಅವರ ಶೌರ್ಯ ಮತ್ತು ತ್ಯಾಗವನ್ನು ಸ್ಮರಿಸಿದರು.
ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಮ್ಮ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ನಲ್ಲಿ, ಕರ್ತವ್ಯದ ವೇಳೆ ತಮ್ಮ ಪ್ರಾಣವನ್ನು ಅರ್ಪಣೆಗೈದ ರಾಜ್ಯದ ಧೈರ್ಯಶಾಲಿ ಪೊಲೀಸ್ ಸಿಬ್ಬಂದಿಗಳ ಶೌರ್ಯ ಮತ್ತು ತ್ಯಾಗದ ಬಗ್ಗೆ ಹಲವಾರು ಚಿತ್ರಗಳನ್ನು ಹೊಂದಿದ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ.
“ರಾಷ್ಟ್ರದ ಸಮಗ್ರತೆ ಮತ್ತು ಸಾರ್ವಭೌಮತ್ವಕ್ಕಾಗಿ ಕರ್ತವ್ಯದ ವೇಳೆಯಲ್ಲಿ ಸರ್ವೋಚ್ಚ ತ್ಯಾಗ ಮಾಡಿದ ಹುತಾತ್ಮರಿಗೆ ನಮ್ಮ ಗೌರವ. ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಪರಿವಾರ, ವೀರ ಪೊಲೀಸರ ಕುಟುಂಬಗಳಿಗೆ ನಮಿಸುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರ ಪ್ರಕಾರ, ಕಳೆದ ಮೂವತ್ತು ವರ್ಷಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ವಿವಿಧ ಭಾಗಗಳಲ್ಲಿ ಭಯೋತ್ಪಾದಕರ ವಿರುದ್ಧ ಹೋರಾಡುವಾಗ 1555 ಪೊಲೀಸರು ಪ್ರಾಣ ತ್ಯಾಗ ಮಾಡಿದ್ದಾರೆ.
ಸೆಪ್ಟೆಂಬರ್ 2018 ರಿಂದ ಆಗಸ್ಟ್ 2019 ರವರೆಗೆ ಕಳೆದ ಒಂದು ವರ್ಷದಲ್ಲಿ, 24 ಪೊಲೀಸ್ ಸಿಬ್ಬಂದಿ ಮತ್ತು ಆರು ವಿಶೇಷ ಪೊಲೀಸ್ ಅಧಿಕಾರಿಗಳು ಕರ್ತವ್ಯದ ಸಾಲಿನಲ್ಲಿ ಹುತಾತ್ಮರಾಗಿದ್ದಾರೆ.
ಅಕ್ಟೋಬರ್ 21 ಅನ್ನು ದೇಶದಲ್ಲಿ ‘ಪೊಲೀಸ್ ಸಂಸ್ಮರಣಾ ದಿನ’ ಎಂದು ಆಚರಿಸಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.